ಬೀದರ್: ಮಾಜಿ ಸಚಿವ, ಶತಾಯುಷಿ ಬೀಮಣ್ಣ ಖಂಡ್ರೆ(102) ಅವರ ಆರೋಗ್ಯದಲ್ಲಿ ಏರುಪೇರಾಗಿದ್ದು, ಬೀದರ್ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ, ನುರಿತ ವೈದ್ಯರ ತಂಡ ಚಿಕಿತ್ಸೆ ನೀಡುತ್ತಿದ್ದುಮ ನಿಗಾ ವಹಿಸಿದೆ.
ಭೀಮಣ್ಣ ಖಂಡ್ರೆ ಅವರ ಆರೋಗ್ಯ ಸ್ಥಿರವಾಗಿದೆ ಎಂದು ಅವರ ಪುತ್ರರೂ ಆಗಿರುವ ಸಚಿವ ಈಶ್ವರ್ ಖಂಡ್ರೆ ತಿಳಿಸಿದ್ದಾರೆ. ಆಸ್ಪತ್ರೆಗೆ ಭೇಟಿ ನೀಡಿ ತಂದೆಯ ಆರೋಗ್ಯ ವಿಚಾರಿಸಿದ ಈಶ್ವರ್ ಖಂಡ್ರೆ ಮಾಹಿತಿ ನೀಡಿ, ತಂದೆಯವರ ಆರೋಗ್ಯ ಸ್ಥಿರವಾಗಿದ್ದು, ಶೀಘ್ರ ಗುಣಮುಖರಾಗುತ್ತಾರೆ ಎನ್ನುವ ವಿಶ್ವಾಸವಿದೆ. ಅವರ ಅಭಿಮಾನಿಗಳು ಆರೋಗ್ಯದ ಬಗ್ಗೆ ಪ್ರಾರ್ಥಿಸಲಿ ಎಂದು ಹೇಳಿದ್ದಾರೆ.
ಬೀದರ್ ನಗರದ ಖಾಸಗಿ ಆಸ್ಪತ್ರೆಗೆ ಭೀಮಣ್ಣ ಖಂಡ್ರೆ ಅವರನ್ನು ದಾಖಲಿಸಲಾಗಿದ್ದು, ವೈದ್ಯಕೀಯ ತಂಡ ನಿಗಾ ವಹಿಸಿ ಚಿಕಿತ್ಸೆ ನೀಡುತ್ತಿದೆ. ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ. ಒಂದು ವಾರದಿಂದ ವಯೋಸಹಜ ಅನಾರೋಗ್ಯದಿಂದ ಬಳಲುತ್ತಿದ್ದರು. ಎರಡು ದಿನಗಳಿಂದ ಬಿಪಿಯಲ್ಲಿ ಏರುಪೇರಾಗಿತ್ತು. ಚಿಕಿತ್ಸೆ ಬಳಿಕ ಇದೀಗ ಅವರ ಆರೋಗ್ಯದಲ್ಲಿ ಸುಧಾರಣೆ ಕಂಡು ಬಂದಿದೆ ಎನ್ನಲಾಗಿದೆ.

