ಬೆಳಗಾವಿ: ಖ್ಯಾತ ಮಕ್ಕಳ ತಜ್ಞ ವೈದ್ಯನ ಮನೆಯಲ್ಲಿ ಗಾಂಜಾ ಪತ್ತೆಯಾಗಿದ್ದು, ವೈದ್ಯನನ್ನು ಬಂಧಿಸಿರುವ ಘಟನೆ ಬೆಳಗಾವಿಯಲ್ಲಿ ನಡೆದಿದೆ.
ವೈದ್ಯ ರಾಹುಲ್ ಬಂಟಿ ಯನ್ನು ಪೊಲೀಸರು ಬಂಧಿಸಿದ್ದಾರೆ. ಹಿರೇಬಾಗೇವಾಡಿ ಸಮುದಾಯ ಆರೋಗ್ಯ ಕೇಂದ್ರದ ಮಕ್ಕಳ ವೈದ್ಯನಾಗಿದ್ದ ಡಾ.ರಾಹುಲ್ ಗಾಂಜಾ ಸೇವನೆ ಮಾಡುತ್ತಿದ್ದ ಬಗ್ಗೆ ಪೊಲೀಸರುಗೆ ಮಾಹಿತಿ ಬಂದಿತ್ತು.
ಈ ಹಿನ್ನೆಲೆಯಲ್ಲಿ ಮಾಳಮಾರುತಿ ಠಾಣೆ ಪೊಲೀಸರು ವೈದ್ಯನ ಮನೆಯಾದ ಬೆಳಗಾವಿ ಶಿವಬಸವ ನಗರದಲ್ಲಿರುವ ಮನೆ ಮೇಲೆ ದಾಳಿ ನಡೆಸಿದ್ದಾರೆ. ಪರಿಶೀಲನೆ ವೇಳೆ ವೈದ್ಯನ ಮನೆಯಲ್ಲಿ 134 ಗ್ರಾಂ ಗಾಂಜಾ ಪತ್ತೆಯಾಗಿದೆ. ಅಲ್ಲದೇ ವೈದ್ಯನನ್ನು ತಪಾಸಣೆ ನಡೆಸಿದಾಗ ಆತ ಗಾಂಜಾ ಸೇವನೆ ಮಾಡುತ್ತಿರುವುದು ದೃಢಪಟ್ಟಿದೆ.
ಸದ್ಯ ವೈದ್ಯ ರಾಹುಲ್ ನನ್ನು ಬಂಧಿಸಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. ಮಾಳಮಾರುತಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

