ತುಮಕೂರು: ಹೊಟ್ಟೆ ನೋವು ತಾಳಲಾರದೇ ಯುವತಿಯೊಬ್ಬರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರು ಜಿಲ್ಲೆಯ ಬ್ಯಾತ ಗ್ರಾಮದಲ್ಲಿ ನಡೆದಿದೆ.
ಕಲಬುರಗಿ ಮೂಲದ ಕೀರ್ತನಾ (19) ಆತ್ಮಹತ್ಯೆಗೆ ಶರಣಾದ ಯುವತಿ. ಕಲಬುರಗಿಯ ಸಾಲಹಳ್ಳಿಯ ಕೀರ್ತನಾ ಕೆಲಸವನ್ನು ಹುಡುಕಿ ತೂಮಕೂರಿಗೆ ಬಂದು ಚಿಕ್ಕಪ್ಪನ ಮನೆಯಲ್ಲಿ ತಂಗಿದ್ದಳು. ಋತುಚಕ್ರದಿಂದಾಗಿ ಯುವತಿ ತೀವ್ರ ಹೊಟ್ಟೆನೋವಿನಿಂದ ಬಳಲುತ್ತಿದ್ದಳು. ಹೊಟ್ಟೆನೋವು ತಾಳಲಾರದೇ ಮನೆಯಲ್ಲಿ ಯಾರೂ ಇಲ್ಲದ ವೇಳೆ ಸೀರೆಯಿಂದ ನೇಣು ಬಿಗಿದುಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾಳೆ ಎನ್ನಲಾಗಿದೆ.
ಕ್ಯಾತಸಂದ್ರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

