HomeLatest Newsಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಬಿಗ್ ಟ್ವಿಸ್ಟ್: ಪೊಲೀಸ್ ತನಿಖೆಯಲ್ಲಿ ಬಯಲಾಯ್ತು ಕೊಲೆ ರಹಸ್ಯ

ಬೆಂಗಳೂರು: ಬೆಂಗಳೂರಿನಲ್ಲಿ ಮಹಿಳಾ ಟೆಕ್ಕಿ ನಿಗೂಢ ಸಾವು ಪ್ರಕರಣಕ್ಕೆ ಟ್ವಿಸ್ಟ್ ಸಿಕ್ಕಿದೆ. ತನಿಖೆಯ ವೇಳೆ ಟೆಕ್ಕಿ ಶರ್ಮಿಳಾ(34) ಕೊಲೆಯಾಗಿರುವುದು ಬೆಳಕಿಗೆ ಬಂದಿದೆ.

ರಾಮಮೂರ್ತಿ ಪೊಲೀಸ್ ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿತ್ತು. ದಕ್ಷಿಣ ಕನ್ನಡ ಜಿಲ್ಲೆ ಮಂಗಳೂರು ಮೂಲದ ಟೆಕ್ಕಿ ಶರ್ಮಿಳಾ ಅವರನ್ನು ಕೊಲೆ ಮಾಡಲಾಗಿದೆ ಎನ್ನುವುದು ತನಿಖೆಯಲ್ಲಿ ಗೊತ್ತಾಗಿದೆ. ಬೆಂಗಳೂರಿನ ಪ್ರತಿಷ್ಠಿತ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದ ಶರ್ಮಿಳಾ ರಾಮಮೂರ್ತಿ ನಗರದ ಸುಬ್ರಹ್ಮಣ್ಯ ಲೇಔಟ್ ನಲ್ಲಿ ವಾಸವಾಗಿದ್ದರು.

ಕೇರಳ ಮೂಲದ ಆರೋಪಿ ಕರ್ನಲ್ ಕುರೈ ಎಂಬುವನನ್ನು ಪೊಲೀಸರು ಬಂಧಿಸಿದ್ದಾರೆ. ಶರ್ಮಿಳಾ ವಾಸವಿದ್ದ ಪಕ್ಕದ ಮನೆಯಲ್ಲಿಯೇ ಕರ್ನಲ್ ಕುರೈ ವಾಸವಾಗಿದ್ದ. ಟೆಕ್ಕಿ ಶರ್ಮಿಳಾ ಅವರನ್ನು ಪ್ರೀತಿಸುತ್ತಿದ್ದ. ದಿನಾಲು ಮಾತುಕತೆ ನಡೆಸುತ್ತಿದ್ದ ಆರೋಪಿ ತಾನು ಪ್ರೀತಿಸುತ್ತಿದ್ದ ವಿಚಾರವನ್ನು ಟೆಕ್ಕಿ ಶರ್ಮಿಳಾ ಅವರಿಗೆ ಹೇಳಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಜನವರಿ 3ರಂದು ಬಾಲ್ಕನಿಯ ಮೂಲಕ ಮನೆಯೊಳಗೆ ನುಗ್ಗಿದ್ದ ಆರೋಪಿ ಸಡನ್ ಆಗಿ ಹಿಂಬದಿಯಿಂದ ಶರ್ಮಿಳಾ ಅವರನ್ನು ಅಪ್ಪಿಕೊಂಡಿದ್ದ. ಅವನಿಂದ ಬಿಡಿಸಿಕೊಳ್ಳಲು ಯತ್ನಿಸಿದಾಗ ಕುತ್ತಿಗೆ ಭಾಗಕ್ಕೆ ಹೊಡೆದಿದ್ದ. ಈ ವೇಳೆ ಟೆಕ್ಕಿ ಶರ್ಮಿಳಾ ಪ್ರಜ್ಞೆ ತಪ್ಪಿ ಬಿದ್ದಿದ್ದರು. ನಂತರ ಅವರನ್ನು ಉಸಿರುಗಟ್ಟಿಸಿ ಕೊಲೆ ಮಾಡಿದ್ದ ಆರೋಪಿ ಸಾಕ್ಷ್ಯ ನಾಶ ಮಾಡಲು ಮನೆಗೆ ಬೆಂಕಿ ಹಚ್ಚಿ ಪರಾರಿಯಾಗಿದ್ದ.

ಮನೆಗೆ ಬೆಂಕಿ ಬಿದ್ದು ಉಸಿರು ಗಟ್ಟಿ ಮೃತಪಟ್ಟಿರಬಹುದು ಎಂದು ಶಂಕಿಸಲಾಗಿತ್ತು. ಅನುಮಾನಾಸ್ಪದ ಸಾವು ಎಂದು ಪೊಲೀಸರು ಕೇಸು ದಾಖಲಿಸಿಕೊಂಡಿದ್ದರು. ಇದೀಗ ಆರೋಪಿ ಬಂಧನವಾಗಿದೆ. ಬೆಂಗಳೂರಿನಲ್ಲಿ ದ್ವಿತೀಯ ಪಿಯುಸಿ ಓದುತ್ತಿದ್ದ ಆರೋಪಿ ಕರ್ನಲ್ ಕುರೈನನ್ನು ಬಂಧಿಸಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular