HomeLatest NewsBREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ: ಆದೇಶ ಮಾರ್ಪಡಿಸಿದ ಕೋರ್ಟ್

BREAKING: ರೇಣುಕಾಸ್ವಾಮಿ ಹತ್ಯೆ ಪ್ರಕರಣ: ಆರೋಪಿ ಪವಿತ್ರಾ ಗೌಡಗೆ ವಾರಕ್ಕೊಮ್ಮೆ ಮನೆಯೂಟ: ಆದೇಶ ಮಾರ್ಪಡಿಸಿದ ಕೋರ್ಟ್

ಬೆಂಗಳೂರು: ನಟ ದರ್ಶನ್ ಹಾಗೂ ಗ್ಯಾಂಗ್ ನಿಂದ ರೇಣುಕಾಸ್ವಾಮಿ ಹತ್ಯೆ ಪ್ರಕರಣದ ಎ1 ಆರೋಪಿಯಾಗಿರುವ ಪವಿತ್ರಾ ಗೌಡಗೆ ಮನೆಯೂಟ ಪೂರೈಕೆ ವಿಚಾರದಲ್ಲಿ ಕೋರ್ಟ್ ತನ್ನ ಆದೇಶ ಮಾರ್ಪಡಿಸಿದೆ.

ಪರಪ್ಪನ ಅಗ್ರಹಾರ ಜೈಲು ಪಾಲಾಗಿರುವ ಪವಿತ್ರಾ ಗೌಡ, ನಟ ದರ್ಶನ್ ಹಾಗೂ ಗ್ಯಾಂಗ್, ಮನೆಯೂಟಕ್ಕಾಗಿ ಕೋರ್ಟ್ ಗೆ ಅರ್ಜಿ ಸಲ್ಲಿಸಿದ್ದರು. ನಟ ದರ್ಶನ್ ಗೆ ಮನೆಯೂಟಕ್ಕೆ ಕೋರ್ಟ್ ನಿರಾಕರಿಸಿತ್ತು. ಪವಿತ್ರಾ ಗೌಡಗೆ ಪ್ರತಿದಿನ ಮನೆಯೂಟ ನೀಡಲು ಕೋರ್ಟ್ ಅವಕಾಶ ನೀಡಿತ್ತು. ಆದರೆ ಜೈಲಾಧಿಕಾರಿಗಳು ಇದಕ್ಕೆ ಆಕ್ಷೇಪ ವ್ಯಕ್ತಪಡಿಸಿದ್ದರು. ಕೈದಿಯೊಬ್ಬಳಿಗೆ ಪ್ರತಿದಿನ ಮನೆಯೂಟಕ್ಕೆ ಅವಕಾಶ ಕೊಟ್ಟರೆ ಜೈಲಿನಲ್ಲಿರುವ ಸಾವಿರಾರು ಕೈದಿಗಳು ತಮಗೂ ಮನೆಯೂಟ ನೀಡಲು ಅವಕಾಶ ಕೇಳುತ್ತಾರೆ ಎಂದು ಆಕ್ಷೇಪಿಸಿ ಕೋರ್ಟ್ ನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಅರ್ಜಿ ವಿಚಾರಣೆ ನಡೆಸಿದ ಬೆಂಗಳೂರಿನ 57ನೇ ಸಿಸಿಹೆಚ್ ಕೋರ್ಟ್ ಪವಿತ್ರಾಗೌಡಗೆ ಪ್ರತಿದಿನ ಮನೆಯೂಟ ಆದೇಶದಲ್ಲಿ ಮಾರ್ಪಾಡು ಮಾಡಿದೆ. ಪವಿತ್ರಾ ಗೌಡಗೆ ವಾರಕ್ಕೆ ಒಮ್ಮೆ ಮನೆಯೂಟ ನೀಡಲು ಅವಕಾಶ ನೀಡಿದೆ. ಇದೇ ವೇಳೆ ಪ್ರಕರಣದ ಇತರ ಆರೋಪಿಗಳಾದ ನಾಗರಾಜು, ಲಕ್ಷ್ಮಣ್ ಗೂ ಮನೆಯೂಟ ನೀಡಲು ಅವಕಾಶ ನೀಡಿ ಆದೇಶ ಹೊರಡಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular