ತುಮಕೂರು: ಶಾಲೆಗೆ ಹೋಗು ತಪ್ಪಿಸಬೇಡ ಎಂದು ಪೋಷಕರು ಬಾಲಕನಿಗೆ ಬುದ್ಧಿ ಮಾತು ಹೇಳಿದ್ದೇ ತಪ್ಪಾಗಿ ಹೋಗಿದೆ. ಬುದ್ಧಿಮಾತಿಗೆ ನೊಂದ ಬಾಲಕ ಬಾವಿಗೆ ಹಾರಿ ಆತ್ಮಹತ್ಯೆಗೆ ಶರಣಾಗಿರುವ ಘಟನೆ ತುಮಕೂರಿನಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಚನ್ನಕಾಟಯ್ಯನ ಗುಡ್ಲು ಗ್ರಾಮದ ವ್ಯಾಪ್ತಿಯಲ್ಲಿ ಈ ದುರಂತ ಸಂಭವಿಸಿದೆ. ತಪ್ಪದೇ ಶಾಲೆಗೆ ಹೋಗು ಎಂದು ಬಾಲಕನಿಗೆ ಬುದ್ದಿ ಹೇಳಿದ್ದಕ್ಕೆ ಮನನೊಂದ ಬಾಲಕ ಸಾವಿಗೆ ಶರಣಾಗಿದ್ದಾನೆ.
ಜಗದೀಶ್ (14) ಆತ್ಮಹತ್ಯೆ ಶರಣಾದ ವಿದ್ಯಾರ್ಥಿ. ಕೆಂಕೆರೆ ಸರ್ಕಾರಿ ಶಾಲೆಯಲ್ಲಿ ೮ನೇ ತರಗಿ ಓದುತ್ತಿದ್ದ. ಚನ್ನಕಾಟಯ್ಯನ ಗುಡ್ಲು ಗ್ರಾಮದ ನಿವಾಸಿ ಎಂದು ತಿಳಿದುಬಂದಿದೆ. ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

