HomeLatest Newsಟಾಕ್ಸಿಕ್ ಟೀಸರ್ ನ ಅಶ್ಲೀಲ ದೃಶ್ಯದ ವಿರುದ್ಧ ಆಮ್ ಆದ್ಮಿ ಪಕ್ಷ ಆಕ್ರೋಶ: ಮಹಿಳಾ ಆಯೋಗಕ್ಕೆ...

ಟಾಕ್ಸಿಕ್ ಟೀಸರ್ ನ ಅಶ್ಲೀಲ ದೃಶ್ಯದ ವಿರುದ್ಧ ಆಮ್ ಆದ್ಮಿ ಪಕ್ಷ ಆಕ್ರೋಶ: ಮಹಿಳಾ ಆಯೋಗಕ್ಕೆ ದೂರು ಸಲ್ಲಿಕೆ

ಬೆಂಗಳೂರು: ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ವಿವಾದಗಳಿಂದ ಭಾರಿ ಸದ್ದು ಮಾಡುತ್ತಿದೆ. ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯದ ವಿರುದ್ಧ ಸಾಲು ಸಾಲು ದೂರು ದಾಖಲಾಗುತ್ತಿವೆ.

ಟೀಸರ್ ರಿಲೀಸ್ ಆಗಿ 24 ಗಂಟೆಗಳಲ್ಲಿಯೇ 200 ಮಿಲಿಯನ್ ವೀಕ್ಷಣೆ ಕಂಡಿದ್ದ ಟಾಕ್ಸಿಕ್ ಟೀಸರ್, ಅದರಲ್ಲಿನ ಅಶ್ಲೀಲ ದೃಶ್ಯ ವಿವಾದಕ್ಕೆ ಕಾರಣವಾಗಿದೆ. ಕೆಲ ದಿನಗಳ ಹಿಂದೆ ವಕೀಲರೊಬ್ಬರು ಟೀಸರ್ ನಲ್ಲಿರುವ ಬೋಲ್ಡ್ ದೃಶ್ಯಗಳ ಬಗ್ಗೆ ತೀವ್ರ ಆಕ್ಷೇಪ ವ್ಯಕ್ತಪಡಿಸಿದ್ದರು. ಕುಟುಂಬದ ಜೊತೆ ಕುಳಿತು ವೀಕ್ಷಿಸಲು ಸಾಧ್ಯವಿಲ್ಲದಂತಹ ಟೀಸರ್. ಮಕ್ಕಳು, ವಿದ್ಯಾರ್ಥಿಗಳಿಗೆ ಇಂತಹ ಟೀಸರ್ ನಿಂದ ಯಾವ ಸಂದೇಶ ನೀಡಲು ಹೋಗಿದ್ದೀರಿ? ಎಂದು ಪ್ರಶ್ನಿಸಿದ್ದರು. ಇದೀಗ ಆಮ್ ಆದ್ಮಿ ಪಕ್ಷ ಕೂಡ ಟೀಸರ್ ವಿರುದ್ಧ ಕಿಡಿಕಾರಿದೆ.

ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿದೆ. ಯಶ್ ಅವರಂತಹ ಖ್ಯಾತ ನಟರು ಇಂತಹ ದೃಶ್ಯದ ಟೀಸರ್ ಮೂಲಕ ಸಮಾಜದಲ್ಲಿ ತಪ್ಪು ಸಂದೇಶ ನೀಡುತ್ತಿರುವುದು ಬೇಸರದ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಮಹಿಳೆಯರು ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೇ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದುತರುತ್ತದೆ. ಕನ್ನಡದ ಐತಿಹಾಸಿಕ ಸಂಸ್ಕೃತಿಗೆ ಮಾಡುತ್ತಿರುವ ಅಪಮಾನ ಎಂದು ಆಪ್ ನ ರಾಜ್ಯ ಮಹಿಳಾ ಕಾರ್ಯದರ್ಶಿ ಉಷಾ ಮೋಹನ್ ಕಿಡಿಕಾರಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರು, ಟಾಕ್ಸಿಕ್ ಚಿತ್ರದ ಟೀಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅಶ್ಲೀಲ ದೃಶ್ಯ ತೆಗೆಯುವಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದಾರೆ.

For Latest News Updates, Join Our Whatsapp Community🚩
RELATED ARTICLES

Most Popular