ಮಂಗಳೂರು: ಡ್ರಗ್ ಪೆಡ್ಲರ್ ಗಳಿಗೆ ಮಾದಕ ವಸ್ತು ಸರಬರಾಜು ಮಾಡುತ್ತಿದ್ದ ಉಗಾಂಡ ದೇಶದ ಮಹಿಳೆಯನ್ನು ಮಂಗಳೂರು ಸಿಸಿಬಿ ಪೊಲೀಸರು ಬೆಂಗಳೂರಿನಲ್ಲಿ ಬಂಧಿಸಿದ್ದಾರೆ.
ಉಗಾಂಡ ಮೂಲದ ಝಾಲಿಯ ಜಲ್ಮಾಂಗು ಬಂಧಿತ ಮಹಿಳೆ. ಮಂಗಳೂರಿಗೆ ಡ್ರಗ್ಸ್ ಪೂರೈಕೆ ಮಾಡುತ್ತಿದ್ದ ಈಕೆಯ ಬಗ್ಗೆ ಮಾಹಿತಿ ಕಲೆ ಹಾಕಿದ ಪೊಲೀಸರು ಬೆಂಗಳೂರಿನ ಜಿಗಣಿ ಪ್ರದೇಶದಲ್ಲಿ ದಾಳಿ ನಡೆಸಿ ಬಂಧಿಸಿದ್ದಾರೆ. 4 ಕೋಟಿ ರೂ. ಮೌಲ್ಯದ 4 ಕೆಜಿ ಎಂಡಿಎಂಎ ಡ್ರಗ್ಸ್ ವಶಕ್ಕೆ ಪಡೆಯಲಾಗಿದೆ.
ಪ್ರಕರಣದಲ್ಲಿ 6 ಮಂದಿ ಡ್ರಗ್ ಪೆಡ್ಲರ್ ಗಳನ್ನು ಬಂಧಿಸಲಾಗಿದೆ ಎಂದು ಮಂಗಳೂರು ಪೊಲೀಸ್ ಆಯುಕ್ತ ಸುಧೀರ್ ಕುಮಾರ್ ರೆಡ್ಡಿ ಮಾಹಿತಿ ನೀಡಿದ್ದಾರೆ.

