HomeLatest Newsರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟ: ರಘುನಾಥ ಚ.ಹ., ಪ್ರಕಾಶ್ ರಾಜ್ ಮೇಹುಗೆ ಅವಾರ್ಡ್

ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟ: ರಘುನಾಥ ಚ.ಹ., ಪ್ರಕಾಶ್ ರಾಜ್ ಮೇಹುಗೆ ಅವಾರ್ಡ್

ಬೆಂಗಳೂರು: 2020 ಹಾಗೂ 2021ನೇ ಸಾಲಿನ ರಾಜ್ಯ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿ ಪ್ರಕಟಗೊಂಡಿದೆ.

2020ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ಸಾಹಿತ್ಯ ಪ್ರಶಸ್ತಿಗೆ ಬಳ್ಳಾರಿ ಜಿಲ್ಲೆ ಸಿರಿಗೇರಿಯ ಅನ್ನಪೂರ್ಣ ಪ್ರಕಾಶನ ಪ್ರಕಟಿಸಿದ, ಹಿರಿಯ ಪತ್ರಕರ್ತ ರಘುನಾಥ ಚ.ಹ.ಅವರು ಆಯ್ದ 20 ಸಿನೆಮಾಗಳ ಕುರಿತು  ಬರೆದ ಲೇಖನಗಳ ಸಂಗ್ರಹ ʼನಮೋ ವೆಂಕಟೇಶʼ ಕೃತಿ ಆಯ್ಕೆಯಾಗಿದೆ.

ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಆಯುಕ್ತರಾದ ಹೇಮಂತ್ ಎಂ. ನಿಂಬಾಳ್ಕರ್ ಅವರ ಅಧ್ಯಕ್ಷತೆಯ ಆಯ್ಕೆ ಸಮಿತಿಯಲ್ಲಿದ್ದ ಹಿರಿಯ ಪತ್ರರ್ತರಾದ ಡಾ.ರಾಜಶೇಖರ ಹತಗುಂದಿ ಹಾಗೂ ಬಸವರಾಜ ಮೇಗಲಕೇರಿ ಅವರು 2020ನೇ ಕ್ಯಾಲೆಂಡರ್ ವರ್ಷದ ಕೃತಿಯನ್ನು ಆಯ್ಕೆ ಮಾಡಿದ್ದರು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

2021ನೇ ಕ್ಯಾಲೆಂಡರ್ ವರ್ಷದ ಚಲನಚಿತ್ರ ವಾರ್ಷಿಕ ಸಾಹಿತ್ಯ ಪ್ರಶಸ್ತಿಗೆ ಬೆಂಗಳೂರಿನ ಸಿರಿಗಂಧ ಪ್ರಕಾಶನ ಪ್ರಕಟಿಸಿರುವ,ಲೇಖಕ ಹಾಗೂ ಚಲನಚಿತ್ರ ನಿರ್ದೇಶಕ ಪ್ರಕಾಶರಾಜ್ ಮೇಹು ಅವರು ಬರೆದ ಡಾ.ರಾಜಕುಮಾರ್ ಬದುಕಿನ ಕುರಿತ ʼಅಂತರಂಗದ ಅಣ್ಣʼ ಕೃತಿ ಆಯ್ಕೆಯಾಗಿದೆ. ಸಾಹಿತಿ ಡಾ.ಚಿದಾನಂದ ಸಾಲಿ ಹಾಗೂ ಪತ್ರಕರ್ತ ಡಾ. ಶರಣು ಹುಲ್ಲೂರು ಅವರು ಪ್ರಶಸ್ತಿ ಆಯ್ಕೆ ಸಮಿತಿಯ ಸದಸ್ಯರಾಗಿದ್ದರು.

ಪ್ರಶಸ್ತಿಯು ವಿಜೇತ ಲೇಖಕರು ಹಾಗೂ ಪ್ರಕಾಶಕರಿಬ್ಬರಿಗೂ ತಲಾ 20 ಸಾವಿರ ರೂ.ನಗದು ಹಾಗೂ 50 ಗ್ರಾಂ ಬೆಳ್ಳಿ ಪದಕಗಳನ್ನು ಒಳಗೊಂಡಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular