HomeLatest Newsಇನ್ನು ಸಾಮಾಜಿಕ ಬಹಿಷ್ಕಾರ ಅಪರಾಧ: 1 ಲಕ್ಷ ದಂಡ, 3 ವರ್ಷ ಜೈಲು ಕಾಯ್ದೆ ಜಾರಿಗೆ...

ಇನ್ನು ಸಾಮಾಜಿಕ ಬಹಿಷ್ಕಾರ ಅಪರಾಧ: 1 ಲಕ್ಷ ದಂಡ, 3 ವರ್ಷ ಜೈಲು ಕಾಯ್ದೆ ಜಾರಿಗೆ ಆದೇಶ

ಬೆಂಗಳೂರು: ವ್ಯಕ್ತಿ, ಕುಟುಂಬವನ್ನು ಸಾಮಾಜಿಕವಾಗಿ ಬಹಿಷ್ಕರಿಸಿರುವುದನ್ನು ಅಪರಾಧವೆಂದು ಪರಿಗಣಿಸಿ 1 ಲಕ್ಷ ರೂಪಾಯಿ ದಂಡ ಮತ್ತು ಮೂರು ವರ್ಷದವರೆಗೆ ಜೈಲು ಶಿಕ್ಷೆಗೆ ಗುರಿಯಾಗಿಸುವ ಕರ್ನಾಟಕ ಸಾಮಾಜಿಕ ಬಹಿಷ್ಕಾರ ಪ್ರತಿಬಂಧ ಕಾಯ್ದೆ 2025 ಬಗ್ಗೆ ರಾಜ್ಯ ಪತ್ರವನ್ನು ಹೊರಡಿಸಲಾಗಿದೆ.

ಕಳೆದ ಜನವರಿ 9ರಂದು ವಿಧೇಯಕಕ್ಕೆ ರಾಜ್ಯಪಾಲರು ಅನುಮೋದನೆ ನೀಡಿದ್ದು, ಇದೀಗ ಗೆಜೆಟ್ ನಲ್ಲಿ ಪ್ರಕಟಿಸಲಾಗಿದೆ. ಕಾಯ್ದೆ ಅನ್ವಯ ಸಭೆ, ಪಂಚಾಯಿತಿ, ಜಮಾವಣೆ, ಮತ, ಅಭಿಪ್ರಾಯ ಸಂಗ್ರಹ ನಡೆಸುವ ಮೂಲಕ ಬಹಿಷ್ಕಾರಕ್ಕೆ ಪ್ರತ್ಯಕ್ಷ ಅಥವಾ ಪರೋಕ್ಷವಾಗಿ ಸಹಾಯ ಒತ್ತಡ, ಪ್ರಚೋದನೆ ನೀಡುವವರನ್ನು ಕೂಡ ಅಪರಾಧಿಗಳೆಂದು ಪರಿಗಣಿಸಿ ಶಿಕ್ಷೆಗೆ ಗುರಿ ಪಡಿಸಲಾಗುವುದು. ಮೂರು ವರ್ಷದವರೆಗೆ ಜೈಲು ಶಿಕ್ಷೆ, ಒಂದು ಲಕ್ಷ ರೂಪಾಯಿ ದಂಡ ಅಥವಾ ಎರಡನ್ನೂ ವಿಧಿಸಲು ಅವಕಾಶವಿದೆ.

ಸಾಮಾಜಿಕ ಬಹಿಷ್ಕಾರಕ್ಕೆ ಒಳಗಾಗುವವರು ಪೊಲೀಸ್ ಠಾಣೆ ಅಥವಾ ನ್ಯಾಯಾಧೀಶರಿಗೆ ನೇರವಾಗಿ ದೂರು ಸಲ್ಲಿಸಬಹುದಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular