HomeLatest News'IAS', KAS ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಪಡೆಯಲು ಅರ್ಜಿ ಆಹ್ವಾನ

‘IAS’, KAS ಪರೀಕ್ಷೆಗಳಿಗೆ 50 ದಿನಗಳ ತರಬೇತಿ ಪಡೆಯಲು ಅರ್ಜಿ ಆಹ್ವಾನ

ಮಡಿಕೇರಿ : ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯದ ಸ್ಪರ್ಧಾತ್ಮಕ ಪರೀಕ್ಷಾ ತರಬೇತಿ ಕೇಂದ್ರದ ವತಿಯಿಂದ ಕೇಂದ್ರ ಲೋಕಸೇವಾ ಆಯೋಗದವರು ನಡೆಸಲಿರುವ ಐಎಎಸ್ ಹಾಗೂ ಕರ್ನಾಟಕ ಲೋಕ ಸೇವಾ ಆಯೋಗದವರು ನಡೆಸಲಿರುವ ಕೆಎಎಸ್ ಮತ್ತಿತರ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ 50 ದಿನಗಳ ತರಬೇತಿಯನ್ನು ಮೈಸೂರಿನ ಕೇಂದ್ರ ಕಚೇರಿಯಲ್ಲಿ ನಡೆಸಲು ನಿರ್ಧರಿಸಲಾಗಿದೆ.

ಆಸಕ್ತರು ದಿನಾಂಕ: 17.01.2026 ರೊಳಗಾಗಿ ಬೆಳಗ್ಗೆ 10 ಗಂಟೆಯಿಂದ ಸಂಜೆ 4.30 ಗಂಟೆಯವರೆಗೆ ತಮ್ಮ ಹೆಸರನ್ನು ನೊಂದಾಯಿಸಿಕೊಳ್ಳಲು 0821-2515944 ದೂರವಾಣಿ ಸಂಖ್ಯೆಯನ್ನು ಸಂಪರ್ಕಿಸಬಹುದೆಂದು ಕರಾಮುವಿ ಕುಲಸಚಿವರಾದ ಪ್ರೊ. ನವೀನ್ ಕುಮಾರ್ ಎಸ್.ಕೆ ಅವರು ತಿಳಿಸಿದ್ದಾರೆ.

ಕೌಶಲ್ಯಾದಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮಕ್ಕೆ ಅರ್ಜಿ ಆಹ್ವಾನ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಕೌಶಲ್ಯಾಭಿವೃದ್ದಿ ಉದ್ಯಮಶೀಲತೆ ಮತ್ತು ಜೀವನೋಪಾಯ ಇಲಾಖೆ, ಬೆಂಗಳೂರು, ಜಿಲ್ಲಾ ಕೈಗಾರಿಕಾ ಕೇಂದ್ರ ಹಾಗೂ ಕರ್ನಾಟಕ ಉದ್ಯಮಶೀಲತಾಭಿವೃದ್ಧಿ ಕೇಂದ್ರ(ಸಿಡಾಕ್) ಧಾರಾವಾಡ, ಇವರ ಸಂಯುಕ್ತ ಆಶ್ರಯದಲ್ಲಿ ಕೊಡಗು ಜಿಲ್ಲೆಯಲ್ಲಿ ಸ್ವಂತ ಉದ್ಯಮವನ್ನು ಸ್ಥಾಪಿಸಲು ಬಯಸುವ ಆಸಕ್ತ ಯುವನಿಧಿ ಯೋಜನೆಯಡಿಯಲ್ಲಿ, ಫಲಾನುಭವಿಗಳಿಗೆ ನಾಲ್ಕು ವಾರಗಳ ಕೌಶಲ್ಯಾದಾರಿತ ಉದ್ಯಮಶೀಲತಾ ಅಭಿವೃದ್ಧಿ ತರಬೇತಿ ಕಾರ್ಯಕ್ರಮವ(ಹಾರ್ಡ್ವೇರ್ ಮತ್ತು ನೆಟ್ ವರ್ಕಿಂಗ್)ನ್ನು ಹಮ್ಮಿಕೊಳ್ಳಲಾಗುತ್ತಿದೆ.

ಈ ಕಾರ್ಯಕ್ರಮದಲ್ಲಿ ಸ್ವಂತ ಉದ್ಯಮ ಸ್ಥಾಪಿಸಲು ಬಯಸುವ ಫಲಾನುಭವಿಗಳಿಗೆ ಉದ್ಯಮಶೀಲತಾ ಪ್ರೇರಣೆ, ಸ್ವಂತ ಉದ್ಯಮ ಸ್ಥಾಪನೆಗಾಗಿ ಸರ್ಕಾರ ಹಾಗೂ ಹಣಕಾಸು ಸಂಸ್ಥೆಗಳಿಂದ ದೊರೆಯುವ ನೆರವು, ಪ್ರೋತ್ಸಾಹ, ಉದ್ಯಮದಾರರಿಗೆ ದೊರೆಯುವ ಸೌಲಭ್ಯಗಳು, ಮಾರುಕಟ್ಟೆ ಮುಂತಾದ ವಿಷಯಗಳ ಹಾಗೂ ಇತರೆ ಕೈಗಾರಿಕಾ ವಿಷಯಗಳ ಕುರಿತು ತರಬೇತಿಯಲ್ಲಿ ಮಾಹಿತಿ ನೀಡಲಾಗುವುದು.

ಆಸಕ್ತ ಫಲಾನುಭವಿಗಳು ಈ ಕಾರ್ಯಕ್ರಮದಲ್ಲಿ ಭಾಗವಹಿಸಿ ಪ್ರಯೋಜನ ಪಡೆದುಕೊಳ್ಳಲು ಕೋರಿದೆ. ಭಾಗವಹಿಸುವವರು ಜನವರಿ, 20 ರೊಳಗೆ ಅರ್ಜಿಯನ್ನು ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ.7760145784, 8310738819 ವಿಳಾಸದಲ್ಲಿ ಕಚೇರಿ ವೇಳೆಯಲ್ಲಿ ಪಡೆಯಬಹುದು ಅಥವಾ ಕರೆ ಮೂಲಕ ಹೆಸರು ನೋಂದಾವಣೆ ಮಾಡಿಕೊಳ್ಳಲು ತಿಳಿಸಿದೆ.ಹೆಚ್ಚಿನ ಮಾಹಿತಿಗೆ ಜಂಟಿ ನಿರ್ದೇಶಕರ ಕಚೇರಿ, ಸಿಡಾಕ್, ಜಿಲ್ಲಾ ಕೈಗಾರಿಕಾ ಕೇಂದ್ರ, ಕೊಹಿನೂರು ರಸ್ತೆ, ಮಡಿಕೇರಿ, ದೂ.ಸಂ.7760145784, 8310738819 ನ್ನು ಸಂಪರ್ಕಿಸಬಹುದು ಎಂದು ಸಿಡಾಕ್ ಜಂಟಿ ನಿರ್ದೇಶಕರು ತಿಳಿಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular