HomeLatest NewsWeather Report: ರಾಜ್ಯದಲ್ಲಿ ತಗ್ಗಿದ ಚಳಿಯ ಅಬ್ಬರ: ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹಾವಾಮಾನ...

Weather Report: ರಾಜ್ಯದಲ್ಲಿ ತಗ್ಗಿದ ಚಳಿಯ ಅಬ್ಬರ: ಕೆಲ ಜಿಲ್ಲೆಗಳಲ್ಲಿ ಮಳೆ ಮುನ್ಸೂಚನೆ ನೀಡಿದ ಹಾವಾಮಾನ ಇಲಾಖೆ

ಬೆಂಗಳೂರು: ರಾಜ್ಯದಲ್ಲಿ ಮೈ ಕೊರೆವ ಚಳಿ ಅಬ್ಬರ ಕೊಂಚ ಕಡಿಮೆಯಾಗಿದೆ. ರಾಜಧಾನಿ ಬೆಂಗಳೂರು ಸೇರಿದಂತೆ ವಿವಿಧ ಜಿಲ್ಲೆಗಳಲ್ಲಿ ಶೀತಗಾಳಿ, ಮೈ ನಡುಗುವ ಚಳಿ ಪ್ರಮಾಣ ತಗ್ಗಿದ್ದು, ಅಲ್ಲಲ್ಲಿ ಬಿಸಿಲು, ಮೋಡ ಕವಿದ ವಾತಾವರಣವಿದೆ.

ಈ ನಡುವೆ ಹವಾಮಾನ ಇಲಾಖೆ ರಾಜ್ಯದ ಕೆಲ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಮುನ್ಸೂಚನೆ ನೀಡಿದೆ. ತಮಿಳುನಾಡಿನ ಕರಾವಳಿಯಲ್ಲಿ ಚಂಡಮಾರುತ ರೂಪುಗೊಂಡಿದ್ದು, ಕರ್ನಾಟಕದ ಕೆಲ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಾಧ್ಯತೆ ಇದೆ.

ಮೈಸೂರು, ಚಾಮರಾಜನಗರ, ಚಿಕ್ಕಮಗಳೂರು, ಉತ್ತರ ಕನ್ನಡ, ಉಡುಪಿ, ಹಾಸನ, ಕೊಡಗು ಜಿಲ್ಲೆಗಳಲ್ಲಿ ಮಳೆಯಾಗಲಿದೆ. ಬೆಂಗಳೂರು, ಮಂಡ್ಯ, ರಾಮನಗರ, ಕೋಲಾರ, ದಾವಣಗೆರೆ, ಚಿತ್ರದುರ್ಗ, ವಿಜಯಪುರ, ಯಾದಗಿರಿ, ರಾಯಚೂರು, ಕೊಪ್ಪಳ, ಹಾವೇರಿ, ಗದಗ, ಬಾಗಲಕೋಟೆ, ಬೀದರ್, ಧಾರವಾಡ, ಶಿವಮೊಗ್ಗ ಜಿಲ್ಲೆಗಳಲ್ಲಿ ಒಣಹವೆ ಮುಂದುವರೆಯಲಿದೆ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular