HomeLatest NewsBIG NEWS : ರಾಜ್ಯದಲ್ಲಿ 300 'KPS' ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ : CM...

BIG NEWS : ರಾಜ್ಯದಲ್ಲಿ 300 ‘KPS’ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ : CM ಸಿದ್ದರಾಮಯ್ಯ

ಕಲಬುರಗಿ : ನೂತನವಾಗಿ ಘೋಷಣೆಯಾಗಿರುವ ಯಡ್ರಾಮಿ ತಾಲ್ಲೂಕಿನಲ್ಲಿ, ಜೇವರ್ಗಿ ಮತಕ್ಷೇತ್ರದಲ್ಲಿ ₹867.49 ಕೋಟಿ ವೆಚ್ಚದ 87 ಕಾಮಗಾರಿಗಳ ಶಂಕುಸ್ಥಾಪನೆ, ₹38.29 ಕೋಟಿ ವೆಚ್ಚದ ಕಾಮಗಾರಿಗಳ ಉದ್ಘಾಟನೆ ಮಾಡಲಾಗಿದೆ. ಒಟ್ಟಾರೆ 906 ಕೋಟಿ ರೂ.ಗಳ ವೆಚ್ಚದ ವಿವಿಧ ಕಾಮಗಾರಿಗಳಿಗೆ ಚಾಲನೆ ನೀಡಲಾಗಿದೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಕಲಬುರಗಿ ಜಿಲ್ಲೆಯ ಯಡ್ರಾಮಿಯಲ್ಲಿ ಆಯೋಜಿಸಿದ್ದ ವಿವಿಧ ಅಭಿವೃದ್ಧಿ ಕಾಮಗಾರಿಗಳ ಶಂಕುಸ್ಥಾಪನೆ ಹಾಗೂ ಉದ್ಘಾಟನೆ ಮತ್ತು ಫಲಾನುಭವಿಗಳಿಗೆ ಸೌಲಭ್ಯ ವಿತರಣೆ ಸಮಾರಂಭದಲ್ಲಿ ಸಿಎಂ ಸಿದ್ದರಾಮಯ್ಯ ಮಾತನಾಡಿದರು.

ವಿರೋಧಪಕ್ಷದವರು ರಾಜಕಾರಣಕ್ಕಾಗಿ ಸುಳ್ಳನ್ನೇ ಅವಲಂಬಿಸಿದ್ದಾರೆ. ಗ್ಯಾರಂಟಿ ಯೋಜನೆಗಳಿಂದ ಮೂಲಸೌಕರ್ಯ ಕಾಮಗಾರಿಗಳಿಗೆ ಸರ್ಕಾರದಲ್ಲಿ ಅನುದಾನವಿಲ್ಲ ಎಂದು ಎಲ್ಲೆಡೆ ಅಪಪ್ರಚಾರ ಮಾಡುತ್ತಿದ್ದಾರೆ. ಸರ್ಕಾರ ದಿವಾಳಿಯಾಗಿದ್ದರೆ ಜೇವರ್ಗಿ ಮತಕ್ಷೇತ್ರ ಒಂದರಲ್ಲಿ ₹906 ಕೋಟಿ ವೆಚ್ಚ ಮಾಡಲಾಗುತ್ತಿರಲಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಗ್ಯಾರಂಟಿ ಯೋಜನೆಗಳಿಗಾಗಿ 1 ಲಕ್ಷದ 12 ಸಾವಿರ ಕೋಟಿ ರೂಪಾಯಿಗೂ ಹೆಚ್ಚು ಅನುದಾನ ವೆಚ್ಚ ಮಾಡಲಾಗಿದೆ. ಚುನಾವಣೆ ಪೂರ್ವದಲ್ಲಿ ನೀಡಿದ್ದ ಆಶ್ವಾಸನೆಯಂತೆ ಅಧಿಕಾರಕ್ಕೆ ಬಂದ ಒಂದೇ ವರ್ಷದಲ್ಲಿ ಎಲ್ಲಾ ಕಾರ್ಯಕ್ರಮಗಳನ್ನು ಜಾರಿಗೆ ತರಲಾಗಿದೆ. ನಮ್ಮ ಸರ್ಕಾರ ಕೊಟ್ಟ ಮಾತಿನಂತೆ ನಡೆದುಕೊಳ್ಳುತ್ತಿದೆ ಎನ್ನುವುದನ್ನು ಜನ ಅರ್ಥ ಮಾಡಿಕೊಳ್ಳಬೇಕು. ನಾವು ಸರ್ಕಾರ ನುಡಿದಂತೆ ನಡೆಯುವವರು.

ಈ ಚುನಾವಣೆಯಲ್ಲಿ ನಮ್ಮ ಪಕ್ಷದ ವತಿಯಿಂದ 592 ಭರವಸೆಗಳನ್ನು ನೀಡಲಾಗಿತ್ತು. 243 ಭರವಸೆಗಳನ್ನು ಈಡೇರಿಸಲಾಗಿದೆ. ಉಳಿದ ಅವಧಿಯಲ್ಲಿ ಮಿಕ್ಕ ಭರವಸೆಗಳನ್ನು ಈಡೇರಿಸಲಾಗುವುದು.ಬಿಜೆಪಿ 2018 ರಿಂದ ಅಧಿಕಾರದಲ್ಲಿದ್ದು, ಅವರು ನೀಡಿದ್ದ 600 ಭರವಸೆಗಳಲ್ಲಿ 10% ಭರವಸೆಗಳನ್ನು ಕೂಡ ಈಡೇರಿಸಿರಲಿಲ್ಲ.

ರಾಜ್ಯದಲ್ಲಿ 63 ಹೊಸ ತಾಲೂಕುಗಳನ್ನು ಘೋಷಣೆ ಮಾಡಲಾಗಿತ್ತು. ಬಿಜೆಪಿ‌ಯವರು 2018 ರಿಂದ 2023 ರವರೆಗೆ ನೂತನ ತಾಲ್ಲೂಕುಗಳಲ್ಲಿ ಕೇವಲ 14 ಕಡೆ ಮಾತ್ರ ತಾಲ್ಲೂಕು ಆಡಳಿತ ಕಚೇರಿ ನಿರ್ಮಾಣ ಮಾಡಿದ್ದರು. 2023ರಲ್ಲಿ ನಾವು ಅಧಿಕಾರಕ್ಕೆ ಬಂದ ನಂತರ 49 ತಾಲ್ಲೂಕುಗಳಲ್ಲಿ ಕೂಡ ಪ್ರಜಾಸೌಧಗಳನ್ನು ಮಂಜೂರು ಮಾಡಿದ್ದು, ನಿರ್ಮಾಣ ಮಾಡಲಾಗುತ್ತಿದೆ.

ನಮ್ಮ ಸರ್ಕಾರದಲ್ಲಿ 17 ತಾಲ್ಲೂಕುಗಳು ಮಂಜೂರಾಗಿದ್ದು, 97 ನಾಡ ಕಚೇರಿಗಳು ಮಂಜೂರಾಗಿವೆ. ಕಲ್ಯಾಣ ಕರ್ನಾಟಕದಲ್ಲಿ 39 ಕಚೇರಿಗಳನ್ನು ಮಂಜೂರು ಮಾಡಲಾಗಿದೆ. ಎರಡನೇ ಹಂತದಲ್ಲಿ 53 ನಿರ್ಮಾಣವಾಗಿವೆ. ಕಲ್ಯಾಣ ಕರ್ನಾಟಕದ 25 ತಾಲ್ಲೂಕುಗಳಲ್ಲಿ ನಾಡ ಕಚೇರಿಗಳನ್ನು ನಮ್ಮ ಸರ್ಕಾರ ಮಂಜೂರು ಮಾಡಿದೆ.

ಈ ಬಾರಿ ಮಳೆ ಹೆಚ್ಚಾಗಿ ಬೆಳೆ ಹಾನಿಯಾಗಿರುವುದರಿಂದ ವೈಮಾನಿಕ ಸಮೀಕ್ಷೆ ಕೈಗೊಂಡು ಪರಿಶೀಲಿಸಿ ಪರಿಹಾರ ಕೊಡಲು ನಿರ್ಧರಿಸಿ ಎಸ್ ಡಿ.ಆರ್.ಎಫ್ ನಿಂದ 1,218 ಕೋಟಿ ಜೊತೆಗೆ ಸರ್ಕಾರದ ವತಿಯಿಂದ ಒಟ್ಟು 1,031ಕೋಟಿ ಹೆಚ್ಚುವರಿಯಾಗಿ ಒದಗಿಸಲಾಗಿದೆ. ರಾಜ್ಯದಲ್ಲಿ ಒಟ್ಟು 14.21 ಲಕ್ಷ ರೈತರ ಬೆಳೆ ಹಾನಿಯಾಗಿದ್ದು, ಕಲ್ಯಾಣ ಕರ್ನಾಟಕ ಭಾಗದಲ್ಲಿ 7,21,786 ರೈತರ ಬೆಳೆ ಹಾನಿಗೊಳಗಾಗಿದೆ. 1,072 ಕೋಟಿ ಬೆಳೆ ಹಾನಿಗೆ ಪರಿಹಾರ ನೀಡಿದೆ.

ಕಲಬುರ್ಗಿ ಜಿಲ್ಲೆಯಲ್ಲಿ 3,23,318 ರೈತರ ಬೆಳೆ ಹಾನಿಯಾಗಿದ್ದು, ₹498 ಕೋಟಿ ಪರಿಹಾರ ನೀಡಲಾಗಿದೆ. ರೈತರ ಖಾತೆಗಳಿಗೆ ಈ ಹಣವನ್ನು ತಲುಪಿಸುವ ಕೆಲಸ ಮಾಡಿದ್ದೇವೆ. ರೈತರ ಸಹಾಯಕ್ಕೆ ಸರ್ಕಾರ ಸದಾ ಮುಂದಾಗಿದೆ. ನೆಟೆ ರೋಗಕ್ಕೆ ತುತ್ತಾದ ತೊಗರಿ ಬೆಳೆಗೆ 233 ಕೋಟಿ ರೂ. ಪರಿಹಾರ ಒದಗಿಸಲಾಗಿದೆ. ಕಬ್ಬಿನ ಬೆಲೆ ಕಡಿಮೆ ಎಂದು ರೈತರು ಪ್ರತಿಭಟಿಸಿದಾಗ ಅವರ ನೆರವಿಗೆ ಸರ್ಕಾರ ಧಾವಿಸಿ ಸರ್ಕಾರದಿಂದ ₹50 ಹಾಗೂ ಕಾರ್ಖಾನೆಯಿಂದ 50 ರೂ. ನಿಗದಿ ಮಾಡಿ 300 ಕೋಟಿಗಳನ್ನು ಸರ್ಕಾರದಿಂದ ಕಬ್ಬಿನ ಬೆಳೆಗಾರರಿಗೆ ನೀಡಲಾಗಿದೆ.

ಬಿಜೆಪಿಯ ಗೃಹ ಸಚಿವ ಹಾಗೂ ಉಪಪ್ರಧಾನಿಯಾಗಿದ್ದ ಅಡ್ವಾಣಿ ಯವರು 371ಜೆ ಜಾರಿ ಮಾಡಲು ಸಾಧ್ಯವಿಲ್ಲ ಎಂದಿದ್ದರು. ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಇದನ್ನು ಜಾರಿ ಮಾಡಿದರು. ಮಲ್ಲಿಕಾರ್ಜುನ ಖರ್ಗೆ ಹಾಗೂ ಧರ್ಮಂ ಸಿಂಗ್ ಹೋರಾಟದಿಂದ ಇದು ಸಾಧ್ಯವಾಯಿತು. ಇದರಿಂದಾಗಿ ಕಲ್ಯಾಣ ಕರ್ನಾಟಕ ಅಭಿವೃದ್ಧಿ ಮಂಡಳಿ ರಚನೆಯಾಯಿತು. ₹13,000 ಕೋಟಿ ಗಳನ್ನು ಮೂರು ವರ್ಷಗಳಲ್ಲಿ ಒದಗಿಸಲಾಗಿದ್ದು, ಈ ವರ್ಷದಲ್ಲಿ 3,000 ಕೋಟಿ ಒದಗಿಸಲಾಗಿದೆ.

300 ‘KPS’ ಶಾಲೆಗಳಿಗೆ ಅಡಿಗಲ್ಲು

ಕೆಕೆಆರ್‌ಡಿಬಿ ಅನುದಾನವನ್ನು ಪೂರ್ಣವಾಗಿ ವೆಚ್ಚ ಮಾಡಬೇಕು. ಶಿಕ್ಷಣ ಮತ್ತು ಆರೋಗ್ಯಕ್ಕೆ ಹೆಚ್ಚಿನ ಒತ್ತು ನೀಡಬೇಕೆಂದು ಅಜಯ್ ಸಿಂಗ್ ಅವರಿಗೆ ತಿಳಿಸಲಾಗಿತ್ತು. ಅದರಂತೆ 300 ಕರ್ನಾಟಕ ಪಬ್ಲಿಕ್ ಶಾಲೆಗಳಿಗೆ ಅಡಿಗಲ್ಲು ಹಾಕಲಾಗಿದೆ. ರಾಜ್ಯದಲ್ಲಿ ಒಟ್ಟು 900 ಕೆಪಿಎಸ್ ಮಂಜೂರಾಗಿದೆ ಎಂದರು.

ಅಸಮಾನತೆ ಹೋಗಲಾಡಿಸಲು ನಂಜುಂಡಪ್ಪ ಅವರ ವರದಿಯನ್ನು ಆಧರಿಸಿ ಶಿಫಾರಸ್ಸುಗಳನ್ನು ಜಾರಿಗೆ ತರಲಾಗಿದೆ. ಇದರ ಪರಿಣಾಮಗಳ ಬಗ್ಗೆ ವರದಿ ಸಲ್ಲಿಸಲು ಗೋವಿಂದ ರಾವ್ ಸಮಿತಿ ರಚಿಸಲಾಗಿದೆ. ಶೀಘ್ರದಲ್ಲಿ ವರದಿಯ ಶಿಫಾರಸುಗಳನ್ನು ಜಾರಿ ಮಾಡಲಾಗುವುದು ಎಂದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular