HomeLatest NewsBIG NEWS : ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ 34 ಮಂದಿ ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ.!

BIG NEWS : ಬೆಂಗಳೂರಲ್ಲಿ ಅಕ್ರಮವಾಗಿ ನೆಲೆಸಿದ್ದ 34 ಮಂದಿ ಬಾಂಗ್ಲಾ ವಲಸಿಗರು ಪೊಲೀಸ್ ವಶಕ್ಕೆ.!

ಬೆಂಗಳೂರು : ಬೆಂಗಳೂರಿನಲ್ಲಿ ಪೊಲೀಸರು ಕಾರ್ಯಾಚರಣೆ ನಡೆಸಿ ಬರೋಬ್ಬರಿ 34 ಮಂದಿ ಬಾಂಗ್ಲಾ ಅಕ್ರಮ ವಲಸಿಗರನ್ನು ಪತ್ತೆ ಮಾಡಿ ತಮ್ಮ ವಶಕ್ಕೆ ಪಡೆದುಕೊಂಡಿದ್ದಾರೆ.

ಬಾಂಗ್ಲಾ ವಲಸಿಗರ ವಿರುದ್ಧ ಸರಣಿ ಕಾರ್ಯಾಚರಣೆ ನಡೆಸಿದ ಎಲೆಕ್ಟ್ರಾನಿಕ್ ಸಿಟಿ ಪೊಲೀಸರು 34 ಮಂದಿಯನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ಕಳೆದ 1 ವಾರದಲ್ಲಿ ವಿವಿಧ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ದಾಳಿ ಪೊಲೀಸರು ದಾಳಿ ನಡೆಸಿದ್ದಾರೆ. ಪರಿಶೀಲನೆ ನಡೆಸಿದಾಗ 34 ಮಂದಿ ಅಕ್ರಮವಾಗಿ ನೆಲೆಸಿರುವುದು ಪತ್ತೆಯಾಗಿದೆ.

ಎಲೆಕ್ಟ್ರಾನಿಕ್ ಸಿಟಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 7, ಹೆಬ್ಬಗೋಡಿ ವ್ಯಾಪ್ತಿಯಲ್ಲಿ 16, ಬೇಗೂರು ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ 10 ಮಂದಿಯನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ನೈಜೀರಿಯಾ ಪ್ರಜೆಗಳು ಪೊಲೀಸ್ ವಶಕ್ಕೆ

ಬೆಂಗಳೂರಿನಲ್ಲಿ ಅಕ್ರಮವಾಗಿ ನೆಲೆಸಿದ್ದ ಇಬ್ಬರು ನೈಜೀರಿಯಾ ಪ್ರಜೆಗಳನ್ನು ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಬಂಧಿತರನ್ನು ಡೊಮ್ಯಾರೋ (34) ಹಾಗೂ ಮಾನ್ಯುಯಲ್ ನಾಜುಬಿ(32) ಎಂದು ಗುರುತಿಸಲಾಗಿದೆ.

ಬೆಂಗಳೂರು ನಗರ ಜಿಲ್ಲೆಯ ಆನೇಕಲ್ ತಾಲೂಕಿನ ಹಾರಗದ್ದೆ ಗ್ರಾಮದಲ್ಲಿ ಅಕ್ರಮವಾಗಿ ನೆಲೆಸಿದ್ದರು. ವೀಸಾ ಅವಧಿ ಮುಗಿದಿದ್ದರೂ ಬೆಂಗಳೂರಿನಲ್ಲಿಯೇ ಅಕ್ರಮವಾಗಿ ನೆಲೆಸಿದ್ದರು. ಬಾಂಗ್ಲಾ ವಲಸಿಗರು ವಾಸವಾಗಿದ್ದಾರೆ ಎಂಬ ಬಗ್ಗೆ ಪೊಲೀಸರಿಗೆ ದೂರು ಬಂದಿತ್ತು. ಈ ಹಿನ್ನೆಲೆಯಲ್ಲಿ ಜಿಗಣಿ ಪೊಲೀಸರು ಪರಿಶೀಲನೆಗೆ ತೆರಳಿದ್ದಾಗ ನೈಜೀರಿಯಾ ಪ್ರಜೆಗಳು ವೀಸಾ ಅವಧಿ ಮುಗಿದರೂ ಇಲ್ಲಿಯೇ ವಾಸವಾಗಿರುವುದು ಬೆಳಕಿಗೆ ಬಂದಿದೆ.ಸ್ಟೂಡೆಂಟ್ ವೀಸಾದಲ್ಲಿ ಬಂದಿದ್ದ ಇಬ್ಬರೂ ವೀಸಾ ಅವಧಿ ಮುಗಿದರೂ ಜಿಗಣಿ ಬಳಿ ಅಕ್ರಮವಾಗಿ ವಾಸವಾಗಿದ್ದರು. ಈ ಹಿನ್ನೆಲೆಯಲ್ಲಿ ಇಬ್ಬರನ್ನೂ ಪೊಲೀಸರು ವಶಕ್ಕೆ ಪಡೆದು, ತನಿಖೆ ಮುಂದುವರೆಸಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular