HomeLatest NewsBREAKING : 'ಟಾಕ್ಸಿಕ್' ಟೀಸರ್ ವಿರುದ್ಧ 'CBFC' ಗೆ ಮಕ್ಕಳ ಹಕ್ಕುಗಳ ಆಯೋಗದಿಂದ ದೂರು ಸಲ್ಲಿಕೆ

BREAKING : ‘ಟಾಕ್ಸಿಕ್’ ಟೀಸರ್ ವಿರುದ್ಧ ‘CBFC’ ಗೆ ಮಕ್ಕಳ ಹಕ್ಕುಗಳ ಆಯೋಗದಿಂದ ದೂರು ಸಲ್ಲಿಕೆ


ಬೆಂಗಳೂರು : ರಾಕಿಂಗ್ ಸ್ಟಾರ್ ಯಶ್ ನಟನೆಯ ಟಾಕ್ಸಿಕ್ ಚಿತ್ರದ ಟೀಸರ್ ಬಿಡುಗಡೆ ಆದಾಗಿನಿಂದ ಚಿತ್ರತಂಡಕ್ಕೆ ಸಾಲು ಸಾಲು ಸಂಕಷ್ಟ ಎದುರಾಗಿದೆ. ಚಿತ್ರದ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯ ತೆಗೆದು ಹಾಕುವಂತೆ ಸಾಲು ಸಾಲು ದೂರು ದಾಖಲಾಗುತ್ತಿದೆ.

ಇದೀಗ ಈ ಕುರಿತು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದೆ. ಹಾಗೂ ಈ ಕುರಿತು ಸಿಬಿಎಫ್ ಸಿ (ಕೇಂದ್ರೀಯ ಚಲನಚಿತ್ರ ಪ್ರಮಾಣೀಕರಣ ಮಂಡಳಿ) ಗೆ ಪತ್ರ ಬರೆದು ಕ್ರಮಕ್ಕೆ ಆಗ್ರಹಿಸಿದೆ. ಬಳಿಕ ಟಾಕ್ಸಿಕ್ ಚಿತ್ರದ ಅಶ್ಲೀಲ ದೃಶ್ಯಕ್ಕೆ ಕತ್ತರಿ ಬೀಳುತ್ತದೆಯಾ ಎಂಬುದನ್ನು ಕಾದು ನೋಡಬೇಕಾಗಿದೆ.

ಟಾಕ್ಸಿಕ್ ಚಿತ್ರದ ಟೀಸರ್ ನಲ್ಲಿ ಅಶ್ಲೀಲ ದೃಶ್ಯಗಳಿದ್ದು, ಇದರಿಂದ ಮಕ್ಕಳ ಸ್ವಾಸ್ಥ್ಯಕ್ಕೆ ಧಕ್ಕೆ ಉಂಟಾಗುತ್ತಿದೆ. ಟೀಸರ್ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಮಕ್ಕಳು ಹಕ್ಕುಗಳ ಆಯೋಗಕ್ಕೆ ಹೈಕೋರ್ಟ್ ವಕೀಲ ಲೋಹಿತ್ ಹನುಮಾಪುರ ಅವರು ದೂರು ಸಲ್ಲಿಸಿದ್ದರು.
ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಟಾಕ್ಸಿಕ್ ಚಿತ್ರದ ಟೀಸರ್ ವಿವಾದಗಳಿಂದ ಭಾರಿ ಸದ್ದು ಮಾಡುತ್ತಿದೆ. ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯದ ವಿರುದ್ಧ ಸಾಲು ಸಾಲು ದೂರು ದಾಖಲಾಗುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಅದೇ ರೀತಿ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕ ಟಾಕ್ಸಿಕ್ ಟೀಸರ್ ನಲ್ಲಿರುವ ಅಶ್ಲೀಲ ದೃಶ್ಯಗಳನ್ನು ತೆಗೆದುಹಾಕುವಂತೆ ಒತ್ತಾಯಿಸಿತ್ತು. . ಯಶ್ ಅವರಂತಹ ಖ್ಯಾತ ನಟರು ಇಂತಹ ದೃಶ್ಯದ ಟೀಸರ್ ಮೂಲಕ ಸಮಾಜದಲ್ಲಿ ತಪ್ಪು ಸಂದೇಶ ನೀಡುತ್ತಿರುವುದು ಬೇಸರದ ಸಂಗತಿ ಎಂದು ಆಮ್ ಆದ್ಮಿ ಪಕ್ಷದ ಮಹಿಳಾ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಟೀಸರ್ ನಲ್ಲಿರುವ ಅಶ್ಲೀಲ ಹಾಗೂ ಮಹಿಳೆಯರು ಮತ್ತು ಸಾಮಾಜಿಕ ಸ್ವಾಸ್ಥ್ಯಕ್ಕೆ ಧಕ್ಕೆಯನ್ನುಂಟು ಮಾಡುತ್ತಿದೆ. ಯಾವುದೇ ವಯಸ್ಸಿನ ಮಿತಿ ಅಥವಾ ಮುನ್ನೆಚ್ಚರಿಕೆ ಇಲ್ಲದೇ ಸಾರ್ವಜನಿಕವಾಗಿ ಬಿಡುಗಡೆಯಾಗಿರುವ ಈ ದೃಶ್ಯಗಳು ಮಹಿಳೆಯರ ಘನತೆಗೆ ಕುಂದುತರುತ್ತದೆ. ಕನ್ನಡದ ಐತಿಹಾಸಿಕ ಸಂಸ್ಕೃತಿಗೆ ಮಾಡುತ್ತಿರುವ ಅಪಮಾನ ಎಂದು ಆಪ್ ನ ರಾಜ್ಯ ಮಹಿಳಾ ಕಾರ್ಯದರ್ಶಿ ಉಷಾ ಮೋಹನ್ ಕಿಡಿಕಾರಿದ್ದಾರೆ.ರಾಜ್ಯ ಮಹಿಳಾ ಆಯೋಗದ ಕಚೇರಿಗೆ ಭೇಟಿ ನೀಡಿದ ಆಮ್ ಆದ್ಮಿ ಪಕ್ಷದ ಮಹಿಳಾ ಘಟಕದ ಸದಸ್ಯರು, ಟಾಕ್ಸಿಕ್ ಚಿತ್ರದ ಟೀಸರ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಹಾಗೂ ಅಶ್ಲೀಲ ದೃಶ್ಯ ತೆಗೆಯುವಂತೆ ನಿರ್ದೇಶಿಸುವಂತೆ ಮನವಿ ಮಾಡಿದ್ದರು.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular