HomeLatest Newsಶಿವಮೊಗ್ಗ ಡಿಸಿ ಫೋಟೋ, ಹೆಸರು ಬಳಸಿ ವಂಚನೆ ಯತ್ನ

ಶಿವಮೊಗ್ಗ ಡಿಸಿ ಫೋಟೋ, ಹೆಸರು ಬಳಸಿ ವಂಚನೆ ಯತ್ನ

ಶಿವಮೊಗ್ಗ: ಜಿಲ್ಲಾಧಿಕಾರಿ ಪ್ರಭುಲಿಂಗ ಕವಳಿಕಟ್ಟಿಯವರ ಹೆಸರು ಮತ್ತು ಅವರ ಭಾವಚಿತ್ರ ಬಳಸಿಕೊಂಡು ಅಧಿಕಾರಿಗಳು ಮತ್ತು ಸಾರ್ವಜನಿಕರನ್ನು ವಂಚಿಸಲು ಸೈಬರ್ ವಂಚಿಕರು ಮುಂದಾಗಿರುವುದು ಬೆಳಕಿಗೆ ಬಂದಿದೆ.

ಜಿಲ್ಲಾಧಿಕಾರಿಯವರ ಹೆಸರು ಮತ್ತು ಭಾವಚಿತ್ರ ಬಳಸಿದ ಸೈಬರ್ ವಂಚಕರು ವಿದೇಶಿ ಸಂಖ್ಯೆ ಹೊಂದಿರುವ ವಾಟ್ಸಾಪ್ ನಂಬರ್ ಮೂಲಕ ಇತ್ತೀಚಿಗೆ ಅಧಿಕಾರಿಗಳು, ಸಾರ್ವಜನಿಕರಿಗೆ ನಕಲಿ ಸಂದೇಶ ಕಳುಹಿಸುತ್ತಿದ್ದಾರೆ.

ಜಿಲ್ಲಾಧಿಕಾರಿಯ ಹೆಸರು ಮತ್ತು ಭಾವಚಿತ್ರ ಸಹಿತ ಸಂದೇಶ ಬರುತ್ತಿದ್ದು, ಇದು ಸೈಬರ್ ವಂಚಕರ ಕೃತ್ಯವಾಗಿದೆ. ಅಧಿಕಾರಿಗಳು, ಸಿಬ್ಬಂದಿ, ಸಾರ್ವಜನಿಕರು ಈ ನಕಲಿ ವಾಟ್ಸಾಪ್ ಸಂದೇಶಕ್ಕೆ ಪ್ರತಿಕ್ರಿಯೆ ನೀಡದಂತೆ ಜಿಲ್ಲಾಧಿಕಾರಿ ತಿಳಿಸಿದ್ದಾರೆ. ಇಂತಹ ಸಂಖ್ಯೆಯಿಂದ ಯಾವುದೇ ರೀತಿಯಲ್ಲಿ ಹಣದ ಬೇಡಿಕೆ, ತಪ್ಪು ಸಂದೇಶ, ಸಹಾಯ ಕೋರಿ ನಕಲಿ ಸಂದೇಶಗಳು ಸಾಮಾಜಿಕ ಜಾಲತಾಣ ವೇದಿಕೆಗಳಲ್ಲಿ ಸ್ವೀಕರಿಸಿದಲ್ಲಿ ಅವುಗಳನ್ನು ನಿರ್ಲಕ್ಷಿಸುವಂತೆ ಮತ್ತು ಅಂತಹ ಸಂಖ್ಯೆಗಳನ್ನು ಬ್ಲಾಕ್ ಮಾಡುವಂತೆ ತಿಳಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular