ಕೋಲಾರ: ಕೆಎಸ್ಆರ್ಟಿಸಿ ಬಸ್ ಡಿಕ್ಕಿಯಾಗಿ ಬೈಕ್ ಸವಾರರಿಬ್ಬರು ಸಾವನ್ನಪ್ಪಿದ ಘಟನೆ ಕೂಸಂದ್ರ ಕ್ರಾಸ್ ಸಮೀಪ ನಡೆದಿದೆ.
ನಾಗರಾಜ್(22), ಶೇಖರ್(23) ಮೃತಪಟ್ಟವರು ಎಂದು ಹೇಳಲಾಗಿದೆ. ಕೋಲಾರ ಜಿಲ್ಲೆ ಶ್ರೀನಿವಾಸಪುರ ತಾಲೂಕಿನ ಕೂಸಂದ್ರ ಗ್ರಾಮದ ಬಳಿ ಬಸ್ ಡಿಕ್ಕಿಯಾಗಿ ಅಪಘಾತ ಸಂಭವಿಸಿದೆ. ಗೌನಿಪಲ್ಲಿ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ನಡೆದಿದ್ದು, ಪೊಲೀಸರು ಸ್ಥಳಕ್ಕೆ ಭೇಟಿ ನೀಡಿದ್ದಾರೆ. ಹೆಚ್ಚಿನ ವಿವರ ನಿರೀಕ್ಷಿಸಲಾಗಿದೆ

