HomeKarnatakaಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು ತಂತ್ರಾಂಶ ಬಗ್ಗೆ ‘ಸಹಾಯವಾಣಿ’ ಸ್ಥಾಪನೆ

ಆಸ್ತಿ ಮಾಲೀಕರಿಗೆ ಗುಡ್ ನ್ಯೂಸ್: ಇ-ಸ್ವತ್ತು ತಂತ್ರಾಂಶ ಬಗ್ಗೆ ‘ಸಹಾಯವಾಣಿ’ ಸ್ಥಾಪನೆ

ಇ-ಸ್ವತ್ತು ತಂತ್ರಾಂಶದ ಸಂಬಂಧ ಕೊಪ್ಪಳ ಜಿಲ್ಲಾ ಪಂಚಾಯತ ವತಿಯಿಂದ ಸಹಾಯವಾಣಿ ಸ್ಥಾಪನೆ ಮಾಡಲಾಗಿದೆ.

ಇ-ಸ್ವತ್ತು ತಂತ್ರಾಂಶದ ಹೊಸ ಅವತರಣಿಕೆಯನ್ನು ಅನುಷ್ಠಾನ ಮಾಡಿರುವುದರಿಂದ ಪ್ರಾರಂಭದಲ್ಲಿ ಸಾರ್ವಜನಿಕರ ಕರೆಗಳಿಗೆ ಸಂಬಂಧಿಸಿದಂತೆ ಸಹಾಯವಾಣಿ(ಕಾಲ್ ಸೆಂಟರ್) ಸಂಖ್ಯೆ: 08539-221207) ಇದ್ದು, ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ, ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಬೆಳಿಗ್ಗೆ 9 ಗಂಟೆಯಿಂದ ಸಂಜೆ 6 ಗಂಟೆಯವರೆಗೆ ಕಡ್ಡಾಯವಾಗಿ ಹಾಜರಾಗಲು ಈಗಾಗಲೇ ಸೂಚನೆ ನೀಡಲಾಗಿರುತ್ತದೆ.

ಈ ಪ್ರಯುಕ್ತ ಇ-ಸ್ವತ್ತು ತಂತ್ರಾಂಶ ಹಾಗೂ ನಿಯಮಗಳನ್ವಯ ಉತ್ತರಿಸುವ ಬಗ್ಗೆ ಮಾರ್ಗದರ್ಶನ ನೀಡಲು ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳಿಗೆ ಕೊಪ್ಪಳ ಜಿಲ್ಲಾ ಪಂಚಾಯತ್ ಕಾರ್ಯಾಲಯದಲ್ಲಿ ಜನವರಿ 12 ರಿಂದ 31ರ ವರೆಗೆ ಬೆಳಿಗ್ಗೆ 10 ರಿಂದ ಸಂಜೆ 5.30 ಗಂಟೆಯವರೆಗೆ (ಶನಿವಾರ ಮತ್ತು ಭಾನುವಾರ ಹಾಗೂ ರಜೆ ದಿನಗಳನ್ನು ಹೊರತುಪಡಿಸಿ) ಹಾಜರಾಗಿ ಕರ್ತವ್ಯ ನಿರ್ವಹಿಸಲು ಸೂಚಿಸಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಇ-ಸ್ವತ್ತು ತಂತ್ರಾಂಶದ ಸಂಬಂಧ ಸಹಾಯವಾಣಿ (ಕಾಲ್ ಸೆಂಟರ್) ಸಿಬ್ಬಂದಿಗೆ ಮಾರ್ಗದರ್ಶನ ನೀಡಲು ಕೆಲವು ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳನ್ನು ನಿಯೋಜಿಸಲಾಗಿದೆ ಎಂದು ಕೊಪ್ಪಳ ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular