ತೀರ್ಥಹಳ್ಳಿ : ರಾಜ್ಯದಲ್ಲಿ ಮತ್ತೊಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಒಂದೇ ಕುಟುಂಬದ ಮೂವರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ.ಕಾರು ಮತ್ತು ಕೆಎಸ್ ಆರ್ ಟಿಸಿ ಬಸ್ ನಡುವೆ ಡಿಕ್ಕಿ ಸಂಭವಿಸಿ ಈ ದುರ್ಘಟನೆ ನಡೆದಿದೆ ಎಂದು ಹೇಳಲಾಗಿದೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಭಾರತೀಪುರದ ಬಳಿ ಈ ಅಪಘಾತ ಸಂಭವಿಸಿದೆ. ಕಾರಿನಲ್ಲಿದ್ದ ಮೂವರು ಮೃತಪಟ್ಟಿದ್ದಾರೆ ಎನ್ನಲಾಗಿದೆ.ಕಾರಿನಲ್ಲಿ ಒಟ್ಟು 6 ಮಂದಿ ಪ್ರಯಾಣಿಸುತ್ತಿದ್ದರು ಎನ್ನಲಾಗಿದೆ.
ಕಾರಿನಲ್ಲಿದ್ದ ರಿಹಾನ್(15) , ರಾಹಿಲ್ (9) , ಹಾಗೂ ಫಾತಿಮಾ (76) ಎಂಬುವವರು ಮೃತಪಟ್ಟಿದ್ದಾರೆ. ಮೃತರು ಚಿಕ್ಕಮಗಳೂರು ಜಿಲ್ಲೆಯ ಶೃಂಗೇರಿ ಮೂಲದವರು ಎಂದು ಗುರುತಿಸಲಾಗಿದೆ. ಅಪಘಾತದಲ್ಲಿ ಚಾಲಕ ಸೇರಿದಂತೆ ಮೂವರಿಗೆ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲಿಸಲಾಗಿದೆ. ಘಟನೆ ನಡೆದ ಸ್ಥಳಕ್ಕೆ ಪೊಲೀಸರು ಧಾವಿಸಿ ಪರಿಶೀಲನೆ ನಡೆಸಿದ್ದಾರೆ.ಸ್ವಿಪ್ಟ್ ಡಿಸೈರ್ ಕಾರು ಶಿವಮೊಗ್ಗ ಕಡೆಯಿಂದ ತೆರಳುತ್ತಿತ್ತು ಎನ್ನಲಾಗಿದೆ.

