ಬಾಗಲಕೋಟೆ : ಬೀದಿನಾಯಿಗಳ ದಾಳಿಗೆ ಬಾಲಕಿ ಬಲಿಯಾದ ಘಟನೆ ಬಾಗಲಕೋಟೆಯ ನವನಗರದಲ್ಲಿ ನಡೆದಿದೆ. ಮೃತ ಬಾಲಕಿಯನ್ನು 10 ವರ್ಷದ ಬಾಲಕಿ ಅಲೈನಾ ಲೋಕಾಪುರ ಎಂದು ಗುರುತಿಸಲಾಗಿದೆ.
ಬೀದಿನಾಯಿ ದಾಳಿಯಿಂದ ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಳು. ಆದರೆ ಚಿಕಿತ್ಸೆ ಫಲಿಸದೇ ಆಕೆ ಮೃತಪಟ್ಟಿದ್ದಾಳೆ ಎಂದು ತಿಳಿದು ಬಂದಿದೆ.
ಬಾಲಕಿ ಅಲೈನಾ ಮನೆ ಮುಂದೆ ಆಟವಾಡುತ್ತಿದ್ದಾಗ ಬೀದಿನಾಯಿಗಳು ಬಾಲಕಿ ಮೇಲೆ ಎರಗಿತ್ತು. ಪರಿಣಾಮ ಆಕೆಯ ಕಣ್ಣು, ಮುಖ, ಮೂಗು, ಮುಖಕ್ಕೆ ಗಂಭೀರ ಗಾಯಗಳಾಗಿತ್ತು. ಗಂಭೀರವಾಗಿ ಗಾಯಗೊಂಡಿದ್ದ ಬಾಲಕಿಯನ್ನು ಬಾಗಲಕೋಟೆಯ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಹೆಚ್ಚಿನ ಚಿಕಿತ್ಸೆಗಾಗಿ ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಿಸದೇ ಇಂದು ಬಾಲಕಿ ಮೃತಪಟ್ಟಿದ್ದಾಳೆ.ಮೃತಪಟ್ಟ ಬಾಲಕಿಯ ಪೋಷಕರ ಆಕ್ರಂದನ ಮುಗಿಲು ಮುಟ್ಟಿದೆ.

