HomeLatest NewsBREAKING : 'ಬ್ಯಾನರ್' ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ 'ಕೈ' ಮುಖಂಡ : ಕಣ್ಣೀರಿಟ್ಟ...

BREAKING : ‘ಬ್ಯಾನರ್’ ತೆರವುಗೊಳಿಸಿದ್ದಕ್ಕೆ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ ‘ಕೈ’ ಮುಖಂಡ : ಕಣ್ಣೀರಿಟ್ಟ ಶಿಡ್ಲಘಟ್ಟ ಪೌರಾಯುಕ್ತೆ.!

ಚಿಕ್ಕಬಳ್ಳಾಪುರ : ಶಿಡ್ಲಘಟ್ಟ ಪೌರಾಯುಕ್ತೆಗೆ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿದ್ದಾರೆ ಎಂಬ ಆರೋಪಗಳು ಕೇಳಿಬಂದಿದ್ದು, ಚಿಕ್ಕಬಳ್ಳಾಪುರದಲ್ಲಿ ಆಕ್ರೋಶಕ್ಕೆ ಕಾರಣವಾಗಿದೆ.

ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ : ಶಿಡ್ಲಘಟ್ಟ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಬೆದರಿಕೆ ಹಾಕಿದ್ದಕ್ಕೆ ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ.

”ನಾನು ಮೊದಲು ಸಾಫ್ಟ್ ವೇರ್ ಇಂಜಿನಿಯರ್ ಆಗಿದ್ದೆ, ತಂದೆಯ ಆಸೆಯಂತೆ ಈ ಕೆಲಸಕ್ಕೆ ಬಂದೆ. ಆದರೆ ನನಗೆ ಕರೆ ಮಾಡಿ ಬೆದರಿಕೆ ಹಾಕಿ ನಿಂದಿಸಿದ್ದಾರೆ. ನನ್ನ ಸರ್ವಿಸ್ ನಲ್ಲಿ ಇಂತಹ ಘಟನೆ ನಡೆದಿರಲಿಲ್ಲ” ಎಂದು ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ.
ಸಾರ್ವಜನಿಕರು, ವಾಹನ ಸವಾರರಿಗೆ ತೊಂದರೆ ಆಗುತ್ತೆ ಅದಕ್ಕೆ ಬ್ಯಾನರ್ ತೆಗೆಸಿದೆ. ಇಷ್ಟಕ್ಕೆ ಬೆದರಿಕೆ ಹಾಕಿದ್ದಾರೆ ಎಂದು ಅಮೃತಾ ಗೌಡ ಕಣ್ಣೀರಿಟ್ಟಿದ್ದಾರೆ. ಇ

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ದರ ನಡುವೆ ಚಿಕ್ಕಬಳ್ಳಾಪುರ ಜಿಲ್ಲೆಯಾದ್ಯಂತ ಅಧಿಕಾರಿಗಳು, ಸಿಬ್ಬಂದಿಪ್ರತಿಭಟನೆ ನಡೆಸಿದ್ದಾರೆ. ರಾಜೀವ್ ಗೌಡ ಬಂಧನಕ್ಕೆ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ.ಅನಧಿಕೃತವಾಗಿ ಹಾಕಿದ್ದ ಬ್ಯಾನರ್ ಅನ್ನು ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular