HomeLatest Newsಕರ್ತವ್ಯ ನಿರತ ಮಹಿಳಾ ಅಧಿಕಾರಿ ಜೊತೆ  ಅಸಭ್ಯ ಪುಂಡನಂತೆ ವರ್ತಿಸಿರುವುದು ಅಕ್ಷಮ್ಯ : ಬಿ.ವೈ ವಿಜಯೇಂದ್ರ...

ಕರ್ತವ್ಯ ನಿರತ ಮಹಿಳಾ ಅಧಿಕಾರಿ ಜೊತೆ  ಅಸಭ್ಯ ಪುಂಡನಂತೆ ವರ್ತಿಸಿರುವುದು ಅಕ್ಷಮ್ಯ : ಬಿ.ವೈ ವಿಜಯೇಂದ್ರ ಕಿಡಿ

ಬೆಂಗಳೂರು :  ಕರ್ತವ್ಯ ನಿರತ ಮಹಿಳಾ ಅಧಿಕಾರಿ ಮೇಲೆ ಅಸಭ್ಯ ಪುಂಡನಂತೆ ವರ್ತಿಸಿರುವುದು ಅಕ್ಷಮ್ಯ ಎಂದು ಬಿಜೆಪಿ ರಾಜ್ಯಾಧ್ಯಕ್ಷ  ಬಿ.ವೈ ವಿಜಯೇಂದ್ರ ಕಿಡಿಕಾರಿದ್ದಾರೆ. ಶಿಡ್ಲಘಟ್ಟ ಪೌರಾಯುಕ್ತೆಗೆ ಅಶ್ಲೀಲವಾಗಿ ನಿಂದಿಸಿದ ಕಾಂಗ್ರೆಸ್ ಮುಖಂಡನ ವಿರುದ್ಧ  ವಿಜಯೇಂದ್ರ ಕಿಡಿಕಾರಿದ್ದಾರೆ.

ರಾಜ್ಯವನ್ನು ಗೂಂಡಾರಾಜ್ಯವನ್ನಾಗಿ ಪರಿವರ್ತಿಸಿರುವ ಈ ಸರ್ಕಾರದಲ್ಲಿ ಕಾನೂನು-ಸುವ್ಯವಸ್ಥೆ ಸಂಪೂರ್ಣ ಕುಸಿದಿದೆ, ಕಾಂಗ್ರೆಸ್ ಮುಖಂಡರುಗಳು ಇದಕ್ಕೆ ತಕ್ಕಂತೆ ಪುಡಿರೌಡಿಗಳಂತೆ ವರ್ತಿಸುತ್ತಿರುವುದು ಆ ಪಕ್ಷದ ಸಂಸ್ಕೃತಿಗೆ ಕನ್ನಡಿ ಹಿಡಿದಿದೆ. ಶಿಡ್ಲಘಟ್ಟದ ಕಾಂಗ್ರೆಸ್ ಮುಖಂಡ ನಿಯಮಬಾಹಿರವಾಗಿ ಕೃತ್ಯ ಎಸಗಿರುವುದು ಮಾತ್ರವಲ್ಲದೆ ಒಬ್ಬ ಕರ್ತವ್ಯ ನಿರತ ಮಹಿಳಾ ಅಧಿಕಾರಿಯ ಮೇಲೆ ಹೀಗೆ ಅಸಭ್ಯ ಪುಂಡನಂತೆ ವರ್ತಿಸುತ್ತಿರುವುದು ಅಕ್ಷಮ್ಯ.

ಸಿದ್ದರಾಮಯ್ಯನವರೇ  , ನಿಮ್ಮದೇ ಪಕ್ಷದ ಈ ಮುಖಂಡನ ಈ ‘ಗೂಂಡಾ ವರ್ತನೆ’ಗೂ ಕೂಡ ಬಳ್ಳಾರಿಯ ಪ್ರಕರಣದಲ್ಲಿ ವಹಿಸಿದಂತೆ ಇದಕ್ಕೂ ನಿಮ್ಮ ‘ಮೌನ’ ಸಮ್ಮತಿ ಇದೆಯೇ? ಅಥವಾ ಅವರ ವಿರುದ್ಧ ಕಾನೂನು ಕ್ರಮಕ್ಕೆ ಆದೇಶಿಸುತ್ತೀರಾ? ಮಾನ್ಯ ಗೃಹ ಸಚಿವ @DrParameshwara ರವರನ್ನಂತೂ ಕೇಳುವಂತೆಯೇ ಇಲ್ಲ. ಅವರ ಬಳಿ ಮಾಹಿತಿ ಇರುವುದೇ ಇಲ್ಲ. ಪೊಲೀಸ್ ಇಲಾಖೆಯ ಕೈಕಟ್ಟಿ ಹಾಕಿ, ಗೂಂಡಾಗಳಿಗೆ ರಕ್ಷಣೆ ನೀಡುತ್ತಿರುವುದೇ ನಿಮ್ಮ ಸಾಧನೆಯೇ? ಅಧಿಕಾರ ಮದದಿಂದ ಜನಸಾಮಾನ್ಯರ, ಪ್ರಾಮಾಣಿಕ ಅಧಿಕಾರಿಗಳ ಮೇಲೆ ದರ್ಪ ತೋರಿಸುವುದನ್ನು ನೋಡಿಕೊಂಡು ಪಕ್ಷ ಸುಮ್ಮನಿರಲಾಗದು. ಒಬ್ಬ ಮಹಿಳಾ ಅಧಿಕಾರಿ ವಿರುದ್ಧ ದಬ್ಬಾಳಿಕೆ ನಡೆಸುವ ಇಂತಹ ಅಶಿಸ್ತಿನ ನಾಯಕರ ವಿರುದ್ಧ ರಾಜ್ಯ ಸರ್ಕಾರ ತಕ್ಷಣ ಕಠಿಣ ಕ್ರಮ ಕೈಗೊಳ್ಳಬೇಕು. ಇಲ್ಲವಾದರೆ ಜನರೇ ರಸ್ತೆಗಿಳಿದು ತಕ್ಕ ಪಾಠ ಕಲಿಸಲಿದ್ದಾರೆ ಎಂದು ಬಿವೈ ವಿಜಯೇಂದ್ರ ಟ್ವೀಟ್ ಮಾಡಿ ಆಕ್ರೋಶ ಹೊರ ಹಾಕಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular