ಬೆಸ್ಕಾಂನಿಂದ ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್ ಬಿಡುಗಡೆ ಮಾಡಲಾಗಿದೆ. ಭೂಮಿಯನ್ನು ಬಾಡಿಗೆ ಭೋಗ್ಯಕ್ಕೆ ನೀಡಲು ಅವಕಾಶ ಕಲ್ಪಿಸಲಾಗಿದೆ. ರಾಜ್ಯಾದ್ಯಂತ ಇವಿ ಚಾರ್ಜಿಂಗ್ ಕೇಂದ್ರಗಳು ಬ್ಯಾಟರಿ ವಿನಿಮಯ ಕೇಂದ್ರ ಸ್ಥಾಪನೆಗೆ ಅವಕಾಶ ಕಲ್ಪಿಸಲಾಗಿದೆ.
ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳ ಸ್ಥಾಪನೆ, ತ್ವರಿತ ವಿದ್ಯುತ್ ಸಂಪರ್ಕಕ್ಕೆ ಏಕಗವಾಕ್ಷಿ ವ್ಯವಸ್ಥೆಯನ್ನು ಹೊಂದಿರುವ ‘ಲ್ಯಾಂಡ್ ಅಗ್ರಿಗೇಟರ್ ಪೋರ್ಟಲ್’ ಅನ್ನು ಬೆಸ್ಕಾಂ ಆರಂಭಿಸಿದೆ.
ಭೂ ಮಾಲೀಕರು, ಸರ್ಕಾರಿ ಇಲಾಖೆಗಳು, ಖಾಸಗಿ ಸಂಸ್ಥೆಗಳು ಇ.ವಿ ಚಾರ್ಜಿಂಗ್ ಹಾಗೂ ಬ್ಯಾಟರಿ ವಿನಿಮಯ ಕೇಂದ್ರಗಳನ್ನು ಸ್ಥಾಪಿಸಲು ಹಾಗೂ ಬೆಸ್ಕಾಂನಿಂದ ತ್ವರಿತವಾಗಿ ವಿದ್ಯುತ್ ಸಂಪರ್ಕ ಪಡೆಯಲು ಪೋರ್ಟಲ್ ಮೂಲಕ ಅವಕಾಶ ಕಲ್ಪಿಸಲಾಗಿದೆ.

