ವಿಬಿ ಜಿ ರಾಮ್ ಜಿ ನೂತನ ಕಾಯ್ದೆಯು ಸಮಾಜದ ಮೇಲೆ ಬೀರುವ ಸಾಮಾಜಿಕ ಹಾಗೂ ಆರ್ಥಿಕ ಪರಿಣಾಮಗಳ ಬಗ್ಗೆ ಸಾರ್ವಜನಿಕರಲ್ಲಿ ಅರಿವು ಹಾಗೂ ಜಾಗೃತಿ ಮೂಡಿಸುವ ತುರ್ತು ಅಗತ್ಯವಿದೆ.
ಈ ಹಿನ್ನೆಲೆಯಲ್ಲಿ ಜನವರಿ 22 ರಿಂದ 31ರ ವರೆಗೆ ವಿಶೇಷ ಅಧಿವೇಶನ ನಡೆಸಿ, ನೂತನ ಕಾಯ್ದೆಯ ಕುರಿತು ವಿಸ್ತೃತವಾಗಿ ಚರ್ಚಿಸಿ, ನಿರ್ಣಯ ಕೈಗೊಳ್ಳಲು ಇಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಲಾಗಿದೆ.

