HomeLatest Newsರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ‘ವಾಟರ್ ಬೆಲ್’ ಬಾರಿಸಲು ಸುತ್ತೋಲೆ

ರಾಜ್ಯದ ಎಲ್ಲಾ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯಲು ‘ವಾಟರ್ ಬೆಲ್’ ಬಾರಿಸಲು ಸುತ್ತೋಲೆ

ಬೆಂಗಳೂರು: ರಾಜ್ಯದ ಎಲ್ಲಾ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ನೀರು ಕುಡಿಯುವಂತೆ ನೆನಪಿಸಲು ವಾಟರ್ ಬೆಲ್‌(ನೀರಿನ ಗಂಟೆ)ಬಾರಿಸುವ ಕುರಿತು ಸುತ್ತೋಲೆ ಹೊರಡಿಸಲಾಗಿದೆ.

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ. ಶಾಲೆಗಳಲ್ಲಿ ಮಕ್ಕಳಿಗೆ ಆಗಾಗೆ, ನೀರು ಕುಡಿಯಬೇಕೆಂಬ ಅರಿವು ಅಷ್ಟಾಗಿ ಇರುವುದಿಲ್ಲ. ಮಕ್ಕಳ ಆರೋಗ್ಯದ ಹಿತದೃಷ್ಠಿಯಿಂದ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗೆ, ನೀರು ಕುಡಿಯುವಂತೆ ಜ್ಞಾಪಿಸಲು “ವಾಟರ್ ಬೆಲ್” (ನೀರಿನ ಗಂಟೆ) ಬಾರಿಸುವುದು ಸೂಕ್ತವಾಗಿರುತ್ತದೆ.

ಮಕ್ಕಳ ಬೆಳವಣಿಗೆಗೆ ಮತ್ತು ಆರೋಗ್ಯಕ್ಕೆ ನೀರು ಅತ್ಯವಶ್ಯಕವಾಗಿರುತ್ತದೆ. ಏಕೆಂದರೆ ಇದು ದೇಹದ ಉಷ್ಣತೆಯನ್ನು ನಿಯಂತ್ರಿಸುವುದರ ಜೊತೆಗೆ ಆಹಾರವನ್ನು ಜೀರ್ಣಿಸಿಕೊಳ್ಳಲು ಸಹಾಯ ಮಾಡುತ್ತದೆ, ಸುರಕ್ಷಿತ ನೀರು ಕುಡಿಯುವುದರಿಂದ ನೀರಿನಿಂದ ಹರಡಬಹುದಾದ ಕಾಯಿಲೆಗಳನ್ನು ತಡೆಗಟ್ಟುತ್ತದೆ, ಮಕ್ಕಳು ಆಟವಾಡಲು ಮತ್ತು ಚಟುವಟಿಕೆಗಳಲ್ಲಿ ಸಕ್ರಿಯವಾಗಿ ಭಾಗವಹಿಸಲು ನೀರು ಅವಶ್ಯಕವಾಗಿರುತ್ತದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಆದ್ದರಿಂದ ರಾಜ್ಯದಲ್ಲಿರುವ ಎಲ್.ಕೆ.ಜಿ. ಯು.ಕೆ.ಜಿ ಒಳಗೊಂಡಂತೆ ಎಲ್ಲಾ ಸರ್ಕಾರಿ ಅನುದಾನಿತ ಮತ್ತು ಅನುದಾನ ರಹಿತ ಶಾಲೆಗಳಲ್ಲಿ ಮಕ್ಕಳಿಗೆ ಆಗಾಗೆ, ನೀರು ಕುಡಿಯುವಂತೆ ಜ್ಞಾಪಿಸಲು ವಾಟರ್ ಬೆಲ್(ನೀರಿನ ಗಂಟೆ) ಬಾರಿಸುವ ನಿಯಮವನ್ನು ಅನುಷ್ಠಾನಗೊಳಿಸಲು ಈ ಮೂಲಕ ತಿಳಿಸಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular