ಬೆಂಗಳೂರು: ಸಂಕ್ರಾಂತಿ ಪ್ರಯುಕ್ತ ಇಂದು ಮುಜರಾಯಿ ಇಲಾಖೆ ವ್ಯಾಪ್ತಿಯ ರಾಜ್ಯದ ಎಲ್ಲಾ ದೇವಾಲಯಗಳಲ್ಲಿ ಭಕ್ತರಿಗೆ ಕನಿಷ್ಠ 50 ಗ್ರಾಂ ಎಳ್ಳು, ಬೆಲ್ಲ, ಕೊಬ್ಬರಿ ಮಿಶ್ರಣ ಪ್ರಸಾದ ನೀಡುವಂತೆ ರಾಜ್ಯ ಸರ್ಕಾರ ಆದೇಶಿಸಿದೆ ಎಂದು ಮುಜರಾಯಿ ಸಚಿವ ರಾಮಲಿಂಗಾರೆಡ್ಡಿ ತಿಳಿಸಿದ್ದಾರೆ.
ಸಂಕ್ರಾಂತಿಯ ಸಾಂಪ್ರದಾಯಿಕ ಆಚರಣೆಗಳನ್ನು ಆಚರಿಸದ ಕಾರಣ ಅವು ಮರೆಯಾಗುತ್ತಿರುವುದು ಕಂಡು ಬರುತ್ತಿದೆ/ ಹೀಗಾಗಿ ಪ್ರತಿ ಹಿಂದೂಗಳು ಹಬ್ಬ ಹರಿದಿನಗಳನ್ನು ಆಚರಿಸಲು ಹಿಂದೂ ಸಂಸ್ಕೃತಿಯನ್ನು ಉಳಿಸಿ ಬೆಳೆಸಿ ಮುನ್ನಡೆಸುವ ನಿಟ್ಟಿನಲ್ಲಿ ಈ ಕ್ರಮ ಕೈಗೊಳ್ಳಲಾಗಿದೆ. ಎಳ್ಳು, ಬೆಲ್ಲವನ್ನು ದೇವರ ಮುಂದೆ ಇಟ್ಟು ನೈವೇದ್ಯ ಮಾಡಿ ಪ್ರಸಾದ ರೂಪದಲ್ಲಿ ನೀಡಬೇಕು. ಸರ್ಕಾರದ ಲಾಂಛನ ಮತ್ತು ದೇವಾಲಯದ ಹೆಸರು ಮುದ್ರಿಸಿದ ಲಕೋಟೆಯಲ್ಲಿ ಭಕ್ತರಿಗೆ ಕನಿಷ್ಠ 50 ಗ್ರಾಂ ಎಳ್ಳು, ಬೆಲ್ಲ, ಕೊಬ್ಬರಿ ಮಿಶ್ರಣ ಪ್ರಸಾದ ನೀಡಬೇಕೆಂದು ಸೂಚಿಸಲಾಗಿದೆ ಎಂದು ಸಚಿವರು ತಿಳಿಸಿದ್ದಾರೆ.

