ಬೆಂಗಳೂರು: ರಾಜ್ಯದ ಸರ್ಕಾರಿ ಶಾಲಾ ಮಕ್ಕಳಿಗೆ ಶೂ, ಸಾಕ್ಸ್ ವಿತರಿಸಲು ಶಾಲಾ ಶಿಕ್ಷಣ ಇಲಾಖೆ ವಿದ್ಯಾ ವಿಕಾಸ ಯೋಜನೆಯಡಿ 6 ಕೋಟಿ ರೂ. ಅನುದಾನ ಬಿಡುಗಡೆ ಮಾಡಲಾಗಿದೆ.
ಪ್ರತಿ ವಿದ್ಯಾರ್ಥಿಗೆ ಒಂದು ಜೊತೆ ಶೂ, ಎರಡು ಜೊತೆ ಸಾಕ್ಸ್ ನೀಡಬೇಕು. ಒಂದರಿಂದ ಐದನೇ ತರಗತಿಯ ಪ್ರತಿ ವಿದ್ಯಾರ್ಥಿಗೆ 265 ರೂ., ಆರರಿಂದ ಎಂಟನೇ ತರಗತಿ ವಿದ್ಯಾರ್ಥಿಗೆ 295 ರೂ., 9 ಮತ್ತು 10ನೇ ತರಗತಿ ವಿದ್ಯಾರ್ಥಿಗಳಿಗೆ 325 ರೂ. ನಿಗದಿಪಡಿಸಲಾಗಿದೆ.
ಆಯಾ ಶಾಲೆಯ ಎಸ್.ಡಿ.ಎಂ.ಸಿ. ಅಧ್ಯಕ್ಷರು, ಮೂವರು ಸದಸ್ಯರು, ಮುಖ್ಯ ಶಿಕ್ಷಕರ ಸಮಿತಿ ಮೂರು ತಿಂಗಳ ಒಳಗೆ ಖರೀದಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ತಿಳಿಸಲಾಗಿದೆ. ಶಿಶೂ, ಸಾಕ್ಸ್ ಗಳ ಗುಣಮಟ್ಟ ಪರಿಶೀಲಿಸಲು ಜಿಲ್ಲಾ ಪಂಚಾಯಿತಿ ಸಿಇಒ ಸಮಿತಿ ರಚಿಸಬೇಕು. ಹಿಂದಿನ ಅವಧಿಯಲ್ಲಿ ಕಳಪೆ ಗುಣಮಟ್ಟದ ಶೂ ವಿತರಿಸಿದ ಶಿಕ್ಷಕರು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಹೇಳಲಾಗಿದೆ.

