HomeLatest Newsಪೌರಾಯುಕ್ತೆಗೆ ನಿಂದಿಸಿ ಜೀವ ಬೆದರಿಕೆ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಲು ಮಹಿಳಾ ಆಯೋಗ...

ಪೌರಾಯುಕ್ತೆಗೆ ನಿಂದಿಸಿ ಜೀವ ಬೆದರಿಕೆ: ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಲು ಮಹಿಳಾ ಆಯೋಗ ಸೂಚನೆ

ಬೆಂಗಳೂರು: ಸಾರ್ವಜನಿಕ ರಸ್ತೆಯಲ್ಲಿ ಬ್ಯಾನರ್ ತೆರವು ವಿಚಾರ ಸಂಬಂಧ ಶಿಡ್ಲಘಟ್ಟದ ಪೌರಾಯುಕ್ತೆ ಅಮೃತಾ ಗೌಡ ಅವರನ್ನು ಕಾಂಗ್ರೆಸ್ ಮುಖಂಡ ನಿಂದಿಸಿ ಜೀವ ಬೆದರಿಕೆ ಹಾಕಿದ ಪ್ರಕರಣಕ್ಕೆ ಸಂಬಂಧಿಸಿದಂತೆ ತಪ್ಪಿತಸ್ಥರ ವಿರುದ್ಧ ಕ್ರಮ ಕೈಗೊಂಡು ವರದಿ ನೀಡಲು ಚಿಕ್ಕಬಳ್ಳಾಪುರ ಜಿಲ್ಲಾ ಪೊಲೀಸ್ ಅಧೀಕ್ಷರಿಗೆ ರಾಜ್ಯ ಮಹಿಳಾ ಆಯೋಗ ಸೂಚಿಸಿದೆ.

ಶಿಡ್ಲಘಟ್ಟದ ನಡುರಸ್ತೆಯಲ್ಲಿ ಕಟ್ಟಿದ ಬ್ಯಾನರ್ ಅನ್ನು ನಗರಸಭೆ ಪೌರಕಾರ್ಮಿಕರು ತೆರವುಗೊಳಿಸಿದ್ದಕ್ಕೆ ಕೋಪಗೊಂಡ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಬೆದರಿಕೆ ಹಾಕಿದ್ದಾರೆ. ತಪ್ಪಿತಸ್ಥರ ವಿರುದ್ಧ ಚಿಕ್ಕಬಳ್ಳಾಪುರ ಎಸ್ಪಿ ಪರಿಶೀಲನೆ ನಡೆಸಿ ಕ್ರಮ ಕೈಗೊಂಡು ವರದಿ ನೀಡುವಂತೆ ರಾಜ್ಯ ಮಹಿಳಾ ಆಯೋಗದ ಕಾರ್ಯದರ್ಶಿ ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular