HomeLatest Newsರಾಜ್ಯದಲ್ಲಿ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ: ಸರ್ಕಾರ ಮಹತ್ವದ ನಿರ್ಧಾರ

ರಾಜ್ಯದಲ್ಲಿ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ಉಚಿತ ಚಿಕಿತ್ಸೆ: ಸರ್ಕಾರ ಮಹತ್ವದ ನಿರ್ಧಾರ

ರಾಜ್ಯದಲ್ಲಿ ಗಿಲೆನ್-ಬಾರಿ ಸಿಂಡ್ರೋಮ್ (GBS) ಎಂಬ ನರಮಂಡಲದ ಕಾಯಿಲೆಯಿಂದ ಬಳಲುತ್ತಿರುವ ರೋಗಿಗಳಿಗೆ ದುಬಾರಿ ಚಿಕಿತ್ಸೆಯನ್ನು ಕೈಗೆಟುಕುವಂತೆ ಮಾಡುವ ಮೂಲಕ ನೆರವಾಗಲು ನಮ್ಮ ಸರ್ಕಾರ ಒಂದು ಮಹತ್ವದ ನಿರ್ಧಾರ ಕೈಗೊಂಡಿದೆ.

ಈ ಕಾಯಿಲೆಯ ಚಿಕಿತ್ಸೆಯಲ್ಲಿ ಅತ್ಯಂತ ಪ್ರಮುಖವೂ ಮತ್ತು ದುಬಾರಿಯೂ ಆದ ‘ಇಂಟ್ರಾವೆನಸ್ ಇಮ್ಯುನೊಗ್ಲಾಬ್ಯುಲಿನ್’ (IVIG) ಚಿಕಿತ್ಸೆಯನ್ನು ಈಗ ‘ಆಯುಷ್ಮಾನ್ ಭಾರತ್-ಆರೋಗ್ಯ ಕರ್ನಾಟಕ’ (AB PMJAY-CM’s ArK) ಯೋಜನೆಯ ವ್ಯಾಪ್ತಿಗೆ ತರಲಾಗಿದೆ. ಈ ಕುರಿತು ಸುವರ್ಣ ಆರೋಗ್ಯ ಸುರಕ್ಷಾ ಟ್ರಸ್ಟ್ (SAST) ಮೂಲಕ ನೂತನ ಸುತ್ತೋಲೆಯನ್ನು ಹೊರಡಿಸಲಾಗಿದೆ. ಅದರಂತೆ,

ಉಚಿತ ಚಿಕಿತ್ಸೆ:

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈ ಮೊದಲು ಇದ್ದ ಮೂಲ ಚಿಕಿತ್ಸೆಯ ಜೊತೆಗೆ ಈಗ IVIG ಥೆರಪಿಯನ್ನೂ ‘ಹೆಚ್ಚುವರಿ ಪ್ಯಾಕೇಜ್’ ಆಗಿ ನೀಡಲಾಗುವುದು.

ಚಿಕಿತ್ಸಾ ವೆಚ್ಚದ ಮಿತಿ:

ಪ್ರತಿ ರೋಗಿಗೆ ಗರಿಷ್ಠ ₹2 ಲಕ್ಷದವರೆಗೆ ಈ ಚಿಕಿತ್ಸಾ ಸೌಲಭ್ಯ ಉಚಿತವಾಗಿ ದೊರೆಯಲಿದೆ.

ಎಲ್ಲಾ ಆಸ್ಪತ್ರೆಗಳಲ್ಲೂ ಸೌಲಭ್ಯ:

ರಾಜ್ಯದ ಎಲ್ಲಾ ಸರ್ಕಾರಿ ಆಸ್ಪತ್ರೆಗಳು ಹಾಗೂ ನೋಂದಾಯಿತ ಖಾಸಗಿ ಆಸ್ಪತ್ರೆಗಳಲ್ಲಿ ಈ ಸೌಲಭ್ಯ ಲಭ್ಯವಿರುತ್ತದೆ.

ಪಾರದರ್ಶಕತೆ:

ಸೌಲಭ್ಯದ ದುರುಪಯೋಗ ತಡೆಯಲು ಮತ್ತು ಅರ್ಹರಿಗೆ ತಲುಪಿಸಲು ಆಸ್ಪತ್ರೆಗಳಿಗೆ ಕಟ್ಟುನಿಟ್ಟಿನ ಮಾರ್ಗಸೂಚಿಗಳನ್ನು ನೀಡಲಾಗಿದೆ.

ಬಡ ಮತ್ತು ಸಾಮಾನ್ಯ ವರ್ಗದ ರೋಗಿಗಳಿಗೆ ಸಾವಿರಾರು ರೂಪಾಯಿ ವೆಚ್ಚದ ಈ ಚಿಕಿತ್ಸೆಯನ್ನು ಉಚಿತವಾಗಿ ಒದಗಿಸುವ ಮೂಲಕ ಅವರ ಬದುಕಿಗೆ ಆಸರೆಯಾಗುವುದು ಸರ್ಕಾರದ ಬದ್ಧತೆಯಾಗಿದೆ ಎಂದು ಹೇಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular