HomeKarnatakaBREAKING: ಸಿದ್ಧರಾಮಯ್ಯ ನನಗೆ 2023ರಲ್ಲೇ ಬಿ ಫಾರಂ ಕೊಟ್ಟಿದ್ರು, ರಿಜ್ವಾನ್ ಅರ್ಷದ್ ಗೆ ಟಿಕೆಟ್ ಕೊಡಿಸಿ...

BREAKING: ಸಿದ್ಧರಾಮಯ್ಯ ನನಗೆ 2023ರಲ್ಲೇ ಬಿ ಫಾರಂ ಕೊಟ್ಟಿದ್ರು, ರಿಜ್ವಾನ್ ಅರ್ಷದ್ ಗೆ ಟಿಕೆಟ್ ಕೊಡಿಸಿ ಗೆಲ್ಲಿಸಿದ್ದು ಜಮೀರ್ ಅಹ್ಮದ್: ನಟ ಝೈದ್ ಖಾನ್ ಹೇಳಿಕೆ

ರಿಜ್ವಾನ್ ಅರ್ಷದ್ ಗೆ ಶಿವಾಜಿನಗರದ ಟಿಕೆಟ್ ಕೊಡಿಸಿದ್ದು ನಮ್ಮ ತಂದೆ ಸಚಿವ ಜಮೀರ್ ಅಹ್ಮದ್ ಖಾನ್ ಎಂದು ಜಮೀರ್ ಅಹ್ಮದ್ ಪುತ್ರ ಝೈದ್ ಖಾನ್ ಹೇಳಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಅವರು, ಶಿವಾಜಿನಗರ ಕ್ಷೇತ್ರದ ಕಾಂಗ್ರೆಸ್ ಶಾಸಕರಾಗಿರುವ ರಿಜ್ವಾನ್ ಅರ್ಷದ್ ಅವರಿಗೆ ಟಿಕೆಟ್ ಕೊಡಿಸಿದ್ದರು. 2023ರಲ್ಲೇ ನನಗೆ ಸಿದ್ದರಾಮಯ್ಯ ಅವರು ಬಿ ಫಾರಂ ನೀಡಿದ್ದರು. ಆದರೆ ನನಗೆ ರಾಜಕೀಯದಲ್ಲಿ ಆಸಕ್ತಿ ಇಲ್ಲ ಎಂದು ಝೈದ್ ಖಾನ್ ಹೇಳಿದ್ದಾರೆ.

ರಿಜ್ವಾನ್ ಅರ್ಷದ್ ಗೆ ಶಿವಾಜಿನಗರದ ಕ್ಷೇತ್ರದ ಟಿಕೆಟ್ ಕೊಡಿಸಿದ್ದು ನಮ್ಮ ತಂದೆ. ಚುನಾವಣೆಯಲ್ಲಿ ರಿಜ್ವಾನ್ ಗೆಲ್ಲಿಸಿದ್ದು ಸಹ ನಮ್ಮ ತಂದೆ. ಶಿವಾಜಿನಗರ ಕ್ಷೇತ್ರದಲ್ಲಿ ಅಲ್ಪಸಂಖ್ಯಾತ ಮತದಾರರು ಹೆಚ್ಚಾಗಿದ್ದಾರೆ. ನಮ್ಮ ಮನೆ ಸಹ ಶಿವಾಜಿನಗರ ಕ್ಷೇತ್ರದಲ್ಲಿ ಇದೆ. ನಾನು ಬಯಸಿದ್ದರೆ ಆಗಲೇ ಶಾಸಕನಾಗುತ್ತಿದ್ದೆ ಜಮೀರ್ ಪುತ್ರ ಹಾಗೂ ನಟ ಝೈದ್ ಖಾನ್ ಅವರ ಹೇಳಿಕೆ ವಿಡಿಯೋ ವೈರಲ್ ಆಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular