HomeLatest News320 ಎಕರೆ ಬಗರ್ ಹುಕುಂ ಜಮೀನು ಹಂಚಿಕೆಯಲ್ಲಿ ಅಕ್ರಮ, ಸರ್ಕಾರಿ ದಾಖಲೆ ತಿದ್ದುಪಡಿ: 5 ಅಧಿಕಾರಿಗಳು...

320 ಎಕರೆ ಬಗರ್ ಹುಕುಂ ಜಮೀನು ಹಂಚಿಕೆಯಲ್ಲಿ ಅಕ್ರಮ, ಸರ್ಕಾರಿ ದಾಖಲೆ ತಿದ್ದುಪಡಿ: 5 ಅಧಿಕಾರಿಗಳು ಅರೆಸ್ಟ್

ಮಂಡ್ಯ: 320 ಎಕರೆ ಬಗರ್ ಹುಕುಂ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, ಐವರು ಅಧಿಕಾರಿಗಳನ್ನು ಬಂಧಿಸಲಾಗಿದೆ.

ಮಂಡ್ಯ ಜಿಲ್ಲೆ ನಾಗಮಂಗಲದಲ್ಲಿ ಜಮೀನು ಹಂಚಿಕೆಯಲ್ಲಿ ಅಕ್ರಮ ನಡೆದಿದ್ದು, 11 ಅಧಿಕಾರಿಗಳ ವಿರುದ್ಧ ಎಫ್ಐಆರ್ ದಾಖಲಿಸಿ ಐದು ಜನರನ್ನು ಬಂಧಿಸಲಾಗಿದೆ. ನಾಗಮಂಗಲ ತಾಲೂಕು ಕಚೇರಿಯ ಎಲ್ ಅಂಡ್ ಡಿ ಶಾಖೆಯ ಎಸ್ಡಿಎ ಸತೀಶ್, ಶಿರಸ್ತೇದಾರ್ ಗಳಾದ ರವಿಶಂಕರ್, ಉಮೇಶ್, ಯೋಗೇಶ್ ಮತ್ತು ರೆಕಾರ್ಡ್ ರೂಂನ ದ್ವಿತೀಯ ದರ್ಜೆ ಸಹಾಯಕ ಗುರುಮೂರ್ತಿ ಅವರನ್ನು ಬಂಧಿಸಲಾಗಿದೆ. ಬಂಧಿತ ಆರೋಪಿಗಳಿಗೆ ನ್ಯಾಯಾಲಯ ನ್ಯಾಯಾಂಗ ಬಂಧನ ವಿಧಿಸಿದೆ. ಉಳಿದ ಆರೋಪಿಗಳಿಗಾಗಿ ಪೊಲೀಸರು ಹುಡುಕಾಟ ನಡೆಸಿದ್ದಾರೆ.

ಲಂಚ ಕೊಟ್ಟವರಿಗೆ ನಕಲಿ ದಾಖಲೆ ಸೃಷ್ಟಿಸಿ ಜಮೀನು ಹಂಚಿಕೆ ಮಾಡಿದ ಆರೋಪ ಕೇಳಿ ಬಂದಿದೆ. ಸಾರ್ವಜನಿಕರ ದೂರಿನ ಮೇರೆಗೆ ಮೊಕದ್ದಮೆ ದಾಖಲಿಸಿಕೊಳ್ಳಲಾಗಿತ್ತು. ಉಪಲೋಕಾಯುಕ್ತ ನ್ಯಾಯಮೂರ್ತಿ ವೀರಪ್ಪ ಸ್ವಯಂ ಪ್ರೇರಿತ ಕೇಸು ದಾಖಲಿಸಿದ್ದರು. ದೂರು ದಾಖಲಿಸಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದರು. ನಾಗಮಂಗಲ ತಾಲೂಕು ಕಚೇರಿಯಲ್ಲಿ ದಾಖಲೆಗಳ ಪರಿಶೀಲನೆ ನಡೆಸಲಾಗಿತ್ತು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಸಾಗುವಳಿ ವಿತರಣಾ ದಾಖಲೆಗಳ ತಿದ್ದುಪಡಿ, ಬೇರೆ ಬೇರೆ ವ್ಯಕ್ತಿಗಳಿಗೆ ಅನುಕೂಲ ಮಾಡಿಕೊಡಲು ಸರ್ಕಾರಿ ದಾಖಲೆಗಳ ತಿದ್ದುಪಡಿ, ಹೆಚ್ಚುವರಿ ಫಲಾನುಭವಿಗಳ ಹೆಸರು ಅಕ್ರಮ ಸೇರ್ಪಡೆ, ಅಕ್ರಮವಾಗಿ ಸರ್ಕಾರಿ ಜಮೀನು ಮಂಜೂರು ಮಾಡಿರುವುದು ಕಂಡುಬಂದಿದೆ. ದಾಖಲೆಗಳ ಕೊಠಡಿಯಲ್ಲಿ ಇರಬೇಕಾದ ಅಸಲು ಹಕ್ಕು ಬದಲಾವಣೆ ರಿಜಿಸ್ಟರ್ ಗಳು ತಾಲೂಕು ಕಚೇರಿ ಸಿಬ್ಬಂದಿ ಮನೆಯಲ್ಲಿ ಪತ್ತೆಯಾಗಿವೆ. ನಕಲಿ ಸಾಗುವಳಿ ಚೀಟಿಗಳನ್ನು ಸೃಷ್ಟಿಸಲಾಗಿದೆ ಎನ್ನಲಾಗಿದ್ದು, ತನಿಖೆ ಕೈಗೊಳ್ಳಲಾಗಿದೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular