ಬೆಂಗಳೂರು: ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಅವರಿಗೆ ಅವಾಚ್ಯವಾಗಿ ನಿಂದಿಸಿ, ಜೀವಬೆದರಿಕೆ ಹಾಕಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡನನ್ನು ತಕ್ಷಣ ಬಂಧಿಸಬೇಕು. ಬಂಧಿಸದಿದ್ದರೆ ಬಿಜೆಪಿ ಹಾಗೂ ಜೆಡಿಎಸ್ ನಿಂದ ಉಗ್ರ ಹೋರಾಟ ನಡೆಸಲಾಗುವುದು ಎಂದು ಬಿಜೆಪಿ ನಾಯಕರು ಎಚ್ಚರಿಕೆ ನೀಡಿದ್ದಾರೆ.
ಮಹಿಳಾ ಅಧಿಕಾರಿಗೆ ಕರೆ ಮಾಡಿ ನಿಂದಿಸಿ, ಜೀವಬೆದರಿಕೆ ಹಾಕಿರುವ ರಾಜೀವ್ ಗೌಡನನ್ನು ಬಂಧ್ಸಬೇಕು ಹಾಗೂ ಕಾಂಗ್ರೆಸ್ ನಿಂದ ಉಚ್ಛಾಟನೆ ಮಾಡಬೇಕು. ಪುಢಾರಿ ರಾಜಕಾರಣಿ ರಾಜೀವ್ ಗೌಡನನ್ನು ಬಂಧಿಸದಿದ್ದರೆ ಶಿಡ್ಲಘಟ್ಟ ಬಂದ್ ಗೆ ಕರೆ ನೀಡಲಾಗುವುದು ಎಂದು ಬಿಜೆಪಿ-ಜೆಡಿಎಸ್ ನಾಯಕರು ಎಚ್ಚರಿಸಿದ್ದಾರೆ.
ಅಕ್ರಮವಾಗಿ ಅಳವಡಿಸಲಾಗಿದ್ದ ಬ್ಯಾನರ್ ನ್ನು ತೆರವುಗೊಳಿಸಿದ್ದಕ್ಕೆ ಪೌರಾಯುಕ್ತೆ ಅಮೃತಾ ಅವರುಗೆ ಕರೆ ಮಾಡಿ ನಿಂದಿಸಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಜೀವ ಬೆದರಿಕೆ ಹಾಕಿದ್ದಾರೆ. ಜನರನ್ನು ಕಳುಹಿಸಿ ಚಪ್ಪಲಿಯಲ್ಲಿ ಹೊಡೆದು ಬೆಂಕಿ ಹಚ್ಚುವುದಾಗಿ ಧಮ್ಕಿ ಹಾಕಿದ್ದರು. ಈ ಕುರಿತ ಆಡಿಯೋ ಕೂಡ ವೈರಲ್ ಆಗಿತ್ತು. ಮಹಿಳಾ ಅಧಿಕಾರಿಯನ್ನು ನಿಂದಿಸಿ, ಜೀವ ಬೆದರಿಕೆ ಹಾಕಿರುವ ಘಟನೆ ಬೆನ್ನಲ್ಲೇ ನಗರಸಭೆ ಅಧಿಕಾರಿಗಳು, ಸಿಬ್ಬಂದಿಗಳು ರಾಜೀವ್ ಗೌಡ ವಿರುದ್ಧ ಪ್ರತಿಭಟನೆ ನಡೆಸಿದ್ದರು. ಬಂಧನಕ್ಕಾಗಿ ಆಗ್ರಹಿಸಿದ್ದರು.
ಅಲ್ಲದೇ ಪೌರಾಯುಕ್ತೆ ಅಮೃತಾ ಗೌಡ ಕೂಡ ಶಿಡ್ಲಘಟ್ಟ ಠಾಣೆಯಲ್ಲಿ ದೂರು ನೀಡಿದ್ದ. ಜೆಡಿಎಸ್ ನಾಯಕರು ಕೂಡ ರಾಜೀವ್ ಗೌಡ ವಿರುದ್ಧ ದೂರು ದಾಖಲಿಸಿದ್ದಾರೆ. ಈ ಹಿನ್ನೆಲೆಯಲ್ಲಿ ರಾಜೀವ್ ಗೌಡ ವಿರುದ್ಧ ಎರಡು ಎಫ್ಐಆರ್ ದಾಖಲಾಗಿದೆ. ಪ್ರಕರಣ ದಾಖಲಾಗುತ್ತಿದ್ದಂತೆ ರಾಜೀವ್ ಗೌಡ ತಲೆಮರೆಸಿಕೊಂಡಿದ್ದು, ನಾಪತ್ತೆಯಾಗಿದ್ದಾರೆ.
ರಾಜೀವ್ ಗೌಡ ಬಂಧನಕ್ಕಾಗಿ ಮೂರು ವಿಶೇಷ ಪೊಲೀಸ್ ತಂಡಗಳನ್ನು ರಚಿಸಲಾಗಿದೆ. ಫೋನ್ ಸ್ವಿಚ್ ಆಫ್ ಮಾಡಿಕೊಂಡು ರಾಜೀವ್ ಗೌಡ್ ಎಸ್ಕೇಪ್ ಆಗಿದ್ದು, ಅವರ ಬಂಧನಕ್ಕಾಗಿ ಬಲೆ ಬೀಸಲಾಗಿದೆ.

