HomeLatest News'ರಾಜೀವ್ ಗೌಡ'ನನ್ನು ಪಕ್ಷದಿಂದ ಉಚ್ಛಾಟಿಸುತ್ತೀರಾ.? ಅಧಿಕಾರಿಯನ್ನೇ ವರ್ಗಾವಣೆ ಮಾಡುತ್ತೀರಾ? : ಬಿಜೆಪಿ ಪ್ರಶ್ನೆ

‘ರಾಜೀವ್ ಗೌಡ’ನನ್ನು ಪಕ್ಷದಿಂದ ಉಚ್ಛಾಟಿಸುತ್ತೀರಾ.? ಅಧಿಕಾರಿಯನ್ನೇ ವರ್ಗಾವಣೆ ಮಾಡುತ್ತೀರಾ? : ಬಿಜೆಪಿ ಪ್ರಶ್ನೆ

ಬೆಂಗಳೂರು :   ರಾಜೀವ್ ಗೌಡನನ್ನು ಪಕ್ಷದಿಂದ ಉಚ್ಛಾಟಿಸುತ್ತೀರಾ.? ಅಥವಾ  ಅಧಿಕಾರಿಯನ್ನೇ ವರ್ಗಾವಣೆ ಮಾಡುತ್ತೀರಾ? ಎಂದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.

ಈ ಬಗ್ಗೆ ಎಕ್ಸ್ ಖಾತೆಯಲ್ಲಿ ಟ್ವೀಟ್ ಮಾಡಿದ ಬಿಜೆಪಿ  ‘ಬಳ್ಳಾರಿಯಲ್ಲಿ ಬ್ಯಾನರ್ ನೆಪವಾಗಿಟ್ಟುಕೊಂಡು ಬಿಜೆಪಿ ನಾಯಕರನ್ನು ಹತ್ಯೆಗೈಯಲು ಸಂಚು ರೂಪಿಸಿದ್ದ ಕಾಂಗ್ರೆಸ್ ನಾಯಕರು, ಇದೀಗ ಶಿಡ್ಲಘಟ್ಟದಲ್ಲಿ ಸರ್ಕಾರಿ ಅಧಿಕಾರಿಗೆ ಅವಾಚ್ಯವಾಗಿ ನಿಂದಿಸಿದ್ದಾರೆ’.

‘ಕಾಂಗ್ರೆಸ್ಸಿನ ಬೀದಿ ರೌಡಿಗಳಿಂದಾಗಿ ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಸಂಪೂರ್ಣವಾಗಿ ಹದಗೆಟ್ಟಿದೆ. ಬಳ್ಳಾರಿ ಪ್ರಕರಣದಲ್ಲಿ ಸಂಚು ರೂಪಿಸಿದ ಕಾಂಗ್ರೆಸ್ ಶಾಸಕನನ್ನು ಸಿದ್ದರಾಮಯ್ಯ  ಸರ್ಕಾರವೇ ಮುಂದೆ ನಿಂತು ಬಚಾವ್ ಮಾಡಿದ ಕಾರಣ ಸಮಾಜಘಾತುಕ ಚಟುವಟಿಕೆ ನಡೆಸಲು ಕಾಂಗ್ರೆಸ್ ಕಾರ್ಯಕರ್ತರಿಗೆ ಮತ್ತಷ್ಟು ಪ್ರೇರಣೆ ನೀಡಿದಂತಾಗಿದೆ.’

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

‘ಸಚಿವರು ಧಮ್ಕಿ ಹಾಕಿರುವ ವಿಡಿಯೋವನ್ನು ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಳ್ಳುವವರ ವಿರುದ್ಧ ಎಫ್‌ಐಆರ್‌ ದಾಖಲಿಸುವ ಸರ್ಕಾರ ತನ್ನದೇ ಗೂಂಡಾ ಕಾರ್ಯಕರ್ತರು ನಡೆಸುವ ಹಲ್ಲೆ, ಕಿರುಕುಳ ಪ್ರಕರಣಗಳ ಬಗ್ಗೆ ಜಾಣ ಮೌನ ತೋರಿಸುತ್ತಿದೆ.ಮಾನ್ಯ ಮುಖ್ಯಮಂತ್ರಿಗಳೇ, ರಾಜೀವ್ ಗೌಡ ಎಂಬ ಪುಡಿ ರೌಡಿಯನ್ನು ಪಕ್ಷದಿಂದ ಉಚ್ಛಾಟಿಸುತ್ತೀರಾ ಅಥವಾ ಅಧಿಕಾರಿಯನ್ನೇ ವರ್ಗಾವಣೆ ಮಾಡುತ್ತೀರಾ? .? ಅಥವಾ  ಅಧಿಕಾರಿಯನ್ನೇ ವರ್ಗಾವಣೆ ಮಾಡುತ್ತೀರಾ? ಎಂದು ಸರ್ಕಾರಕ್ಕೆ ಬಿಜೆಪಿ ಪ್ರಶ್ನೆ ಮಾಡಿದೆ.

ಜನವರಿ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟ

ಕಾಂಗ್ರೆಸ್‌ ಸರ್ಕಾರದ ವೈಫಲ್ಯಗಳು, ಭ್ರಷ್ಟಾಚಾರ, ರಾಜ್ಯದಲ್ಲಿನ ಅರಾಜಕತೆ, ರಾಜ್ಯದ ರೈತರ ಸಮಸ್ಯೆ, ಡ್ರಗ್ಸ್ ಹಾವಳಿ – ಇವೆಲ್ಲ ವಿಚಾರಗಳನ್ನು ಮುಂದಿಟ್ಟುಕೊಂಡು ರಾಜ್ಯದೆಲ್ಲೆಡೆ ವಿವಿಧ ಹಂತಗಳಲ್ಲಿ ಹೋರಾಟ ಮಾಡಲು ಪಕ್ಷ ಈಗಾಗಲೇ ನಿರ್ಧರಿಸಿದೆ. ರಾಜ್ಯದಲ್ಲಿ ಕಾನೂನು ಸುವ್ಯವಸ್ಥೆ ಹದಗೆಟ್ಟಿದೆ. ಈ ಸಂದರ್ಭದಲ್ಲಿ ಜನವರಿ 17 ರಂದು ಬಳ್ಳಾರಿಯಲ್ಲಿ ಬೃಹತ್ ಹೋರಾಟವನ್ನು ನಾವು ಹಮ್ಮಿಕೊಂಡಿದ್ದೇವೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ಹೇಳಿದ್ದಾರೆ.

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular