ಬೆಂಗಳೂರು : 2026ರ ಎಸ್.ಎಸ್.ಎಲ್.ಸಿ. ಪರೀಕ್ಷೆ-1ಕ್ಕೆ ನೋಂದಣಿಯಾಗಿರುವ ಖಾಸಗಿ ಅಭ್ಯರ್ಥಿ, ಖಾಸಗಿ ಪುನರಾವರ್ತಿತ ಅಭ್ಯರ್ಥಿ ಮತ್ತು ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳ ಮಾಹಿತಿಯನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳುವ ಬಗ್ಗೆ ಪರೀಕ್ಷಾ ಮಂಡಳಿ ಸುತ್ತೋಲೆ ಹೊರಡಿಸಿದೆ.
2026 ರ ಎಸ್.ಎಸ್.ಎಲ್.ಸಿ ಪರೀಕ್ಷೆಗೆ Public domain ಮೂಲಕ 23618 ಖಾಸಗಿ ಅಭ್ಯರ್ಥಿಗಳು, 3551 ಖಾಸಗಿ ಪುನರಾವರ್ತಿತ ಅಭ್ಯರ್ಥಿಗಳು ಮತ್ತು 62753 ಶಾಲಾ ಪುನರಾವರ್ತಿತ ವಿದ್ಯಾರ್ಥಿಗಳು ನೋಂದಣಿಯಾಗಿದ್ದು, ನೋಂದಣಿಯಾಗಿರುವ ಅಭ್ಯರ್ಥಿಗಳ ಮಾಹಿತಿ ನಮೂನೆಗಳನ್ನು ಅಭ್ಯರ್ಥಿಗಳ ಲಾಗಿನ್‌ಲ್ಲಿ ಲಭ್ಯಗೊಳಿಸಲಾಗಿದೆ. ಅಭ್ಯರ್ಥಿಗಳು, ಅವುಗಳನ್ನು ಡೌನ್‌ಲೋಡ್ ಮಾಡಿಕೊಂಡು ಪರಿಶೀಲಿಸಿಕೊಳ್ಳುವುದು.
ಅಭ್ಯರ್ಥಿಗಳ ಮಾಹಿತಿಯಲ್ಲಿ ಯಾವುದೇ ತಿದ್ದುಪಡಿಗಳಿದ್ದಲ್ಲಿ ಈಗಾಗಲೇ allot ಆಗಿರುವ ಮುಖ್ಯ ಶಿಕ್ಷಕರನ್ನು ಸಂಪರ್ಕಿಸಿ ಸೂಕ್ತ ದಾಖಲೆಗಳನ್ನು ಸಲ್ಲಿಸಿ, ಮಾಹಿತಿ ಸರಿಪಡಿಸಿಕೊಳ್ಳುವುದು ಅಭ್ಯರ್ಥಿಗಳ ವಿವರಗಳನ್ನು ಪರಿಶೀಲಿಸಿ ಸರಿಪಡಿಸಿಕೊಳ್ಳಲು ಇದು ಕೊನೆಯ ಅವಕಾಶವಾಗಿದ್ದು, ಇದೇ ವಿವರಗಳು ಪ್ರವೇಶ ಪತ್ರ ಹಾಗೂ ಅಂಕಪಟ್ಟಿಗಳಲ್ಲಿ ಮುದ್ರಣವಾಗುತ್ತವೆ. ಅಭ್ಯರ್ಥಿಗಳು ಈ ಹಂತದಲ್ಲಿ ಮಾಹಿತಿ ಪರಿಶೀಲನ ಮಾಡದೇ ತಿದ್ದುಪಡಿಗಳನ್ನು ಸರಿಪಡಿಸಿಕೊಳ್ಳದಿದ್ದಲ್ಲಿ ಮುಂದೆ, ಸಂಬಂಧಪಟ್ಟ ಅಭ್ಯರ್ಥಿಗಳೇ ಹೊಣೆಗಾರರಾಗಿರುತ್ತಾರೆ.
ಅಭ್ಯರ್ಥಿಗಳ ಮಾಹಿತಿ ಪರಿಶೀಲನಾ ನಮೂನೆಗಳನ್ನು ಡೌನ್‌ಲೋಡ್ ಮಾಡಿಕೊಂಡು, ತಿದ್ದುಪಡಿಗಳನ್ನು ಮಾಡಲು 22-01-2026 ಅಂತಿಮ ದಿನಾಂಕವಾಗಿರುತ್ತದೆ. ನಿಗದಿಪಡಿಸಿರುವ ಸಮಯದೊಳಗೆ ಅಭ್ಯರ್ಥಿಗಳ ಮಾಹಿತಿಗಳನ್ನು ಸರಿಪಡಿಸಿಕೊಳ್ಳಲು ಸೂಚಿಸಿದೆ. ದಿನಾಂಕ ವಿಸ್ತರಣೆಗೆ ಅವಕಾಶ ಇರುವುದಿಲ್ಲ ಎಂದು ತಿಳಿಸಿದೆ.


