HomeKarnatakaವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕಾಲೇಜುಗಳಲ್ಲಿ 'ಇಂಗ್ಲಿಷ್ ಸ್ಕಿಲ್ಸ್ ಫಾರ್ ಯೂತ್' ಆರಂಭ

ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಕಾಲೇಜುಗಳಲ್ಲಿ ‘ಇಂಗ್ಲಿಷ್ ಸ್ಕಿಲ್ಸ್ ಫಾರ್ ಯೂತ್’ ಆರಂಭ

ಬೆಂಗಳೂರು: ಸರ್ಕಾರಿ ಕಾಲೇಜುಗಳ ವಿದ್ಯಾರ್ಥಿಗಳಲ್ಲಿ ಭಾಷಾ ಸಂವಹನ ಸಾಮರ್ಥ್ಯ ಬೆಳೆಸಲು ಕಾಲೇಜು ಶಿಕ್ಷಣ ಇಲಾಖೆ ಕ್ರಮ ಕೈಗೊಂಡಿದೆ.

ಯುವಕರಿಗೆ ಇಂಗ್ಲಿಷ್ ಕೌಶಲ್ಯ ಕಲಿಸಲು ಇಂಗ್ಲಿಷ್ ಸ್ಕಿಲ್ಸ್ ಫಾರ್ ಯೂತ್ ಎನ್ನುವ ಕಾರ್ಯಕ್ರಮವನ್ನು ಆರಂಭಿಸಲಾಗುತ್ತಿದೆ. ಬ್ರಿಟಿಷ್ ಕೌನ್ಸಿಲ್ ಮತ್ತು ಮೈಕ್ರೋಸಾಫ್ಟ್ ಸಹಭಾಗಿತ್ವದಲ್ಲಿ 30 ಪ್ರಥಮ ದರ್ಜೆ ಕಾಲೇಜು, 25 ಪಾಲಿಟೆಕ್ನಿಕ್, 17 ಸರ್ಕಾರಿ ಇಂಜಿನಿಯರಿಂಗ್ ಕಾಲೇಜುಗಳಲ್ಲಿ ಪ್ರಸಕ್ತ ಸಾಲಿನಲ್ಲಿ ಪ್ರಾಯೋಗಿಕವಾಗಿ ಟ್ರೈನ್ ದಿ ಟ್ರೈನರ್ ಪದ್ಧತಿಯಲ್ಲಿ ಅನುಷ್ಠಾನಗೊಳಿಸಲು ಉದ್ದೇಶಿಸಲಾಗಿದೆ.

ಕಾರ್ಯಕ್ರಮವು ಮಿಶ್ರ ಹಾಗೂ ಸಂವಾದದ ರೀತಿ ನಡೆಯಲಿದೆ. ಮುಂದಿನ ದಿನಗಳಲ್ಲಿ 430 ಪದವಿ ಕಾಲೇಜುಗಳಲ್ಲಿಯೂ ಇಂಗ್ಲಿಷ್ ಸ್ಕಿಲ್ಸ್ ಫಾರ್ ಯೂತ್ ಆರಂಭಿಸುವ ಚಿಂತನೆ ಇದೆ. ಉನ್ನತ ಶಿಕ್ಷಣ ಸಚಿವ ಡಾ.ಎಂ.ಸಿ. ಸುಧಾಕರ್ ಜನವರಿ 20 ಬೆಳಗ್ಗೆ 11 ಗಂಟೆಗೆ ಬೆಂಗಳೂರಿನ ಎಸ್.ಜೆ.ಪಿ. ಪಾಲಿಟೆಕ್ನಿಕ್ ನಲ್ಲಿ ಯೋಜನೆ ಮತ್ತು ಓರಿಯೆಂಟೇಷನ್ ಗೆ ಚಾಲನೆ ನೀಡುವರು. ಸಂವಹನ ಕೌಶಲ ಹೆಚ್ಚಳ ಮಾಡುವ ನಿಟ್ಟಿನಲ್ಲಿ ಯುವಕರಿಗೆ ಇಂಗ್ಲಿಷ್ ಕೌಶಲ ಕಾರ್ಯಕ್ರಮ ಆರಂಭಿಸಲಾಗುತ್ತಿದೆ ಎಂದು ಕಾಲೇಜು ಶಿಕ್ಷಣ ಇಲಾಖೆ ಆಯುಕ್ತರು ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular