HomeLatest Newsರಾಜ್ಯದ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳಲ್ಲಿ ಯೋಗ, ಧ್ಯಾನ ತರಗತಿ ಕಡ್ಡಾಯ: ರಾಜೀವ್ ಗಾಂಧಿ ಆರೋಗ್ಯ ವಿವಿ...

ರಾಜ್ಯದ ವೈದ್ಯಕೀಯ, ನರ್ಸಿಂಗ್ ಕಾಲೇಜುಗಳಲ್ಲಿ ಯೋಗ, ಧ್ಯಾನ ತರಗತಿ ಕಡ್ಡಾಯ: ರಾಜೀವ್ ಗಾಂಧಿ ಆರೋಗ್ಯ ವಿವಿ ನಿರ್ಧಾರ

ಬೆಂಗಳೂರು: ದುಶ್ಚಟಗಳ ಕಡೆ ವಾಲುತ್ತಿರುವ ಯುವಕರ ಮನೆ ಪರಿವರ್ತನೆ ಮಾಡಲು, ಒತ್ತಡದಿಂದ ಮುಕ್ತಗೊಳಿಸಲು ರಾಜ್ಯದ ವೈದ್ಯಕೀಯ ಮತ್ತು ನರ್ಸಿಂಗ್ ಕಾಲೇಜುಗಳಲ್ಲಿ ಯೋಗ, ಧ್ಯಾನ ತರಗತಿ ಕಡ್ಡಾಯಗೊಳಿಸಲು ರಾಜೀವ್ ಗಾಂಧಿ ಆರೋಗ್ಯ ವಿಜ್ಞಾನಗಳ ವಿಶ್ವವಿದ್ಯಾಲಯ ನಿರ್ಧರಿಸಿದೆ.

ದೇಶದ ಶೇಕಡ 20 ರಿಂದ 30ರಷ್ಟು ಯುವಕರು ಮದ್ಯಪಾನ, ಧೂಮಪಾನ, ಡ್ರಗ್ಸ್ ನಿಂದ ಜೀವ, ಜೀವನ ಕಳೆದುಕೊಳ್ಳುತ್ತಿರುವುದು ಸಮೀಕ್ಷೆಗಳಿಂದ ಗೊತ್ತಾಗಿದೆ. ಅಲ್ಲದೆ, ಮೊಬೈಲ್, ಸಾಮಾಜಿಕ ಜಾಲತಾಣಗಳ ಅತಿಯಾದ ಬಳಕೆ, ಕೌಟುಂಬಿಕ ಕಾರಣ, ಜೀವನ ಶೈಲಿ, ಹಣಕಾಸು ಸಮಸ್ಯೆ ಸೇರಿದಂತೆ ಅನೇಕ ಸಮಸ್ಯೆಗಳನ್ನು ಯುವಕರು ಎದುರಿಸುತ್ತಿದ್ದಾರೆ.

ವಿದ್ಯಾರ್ಥಿಗಳನ್ನು ಒತ್ತಡದಿಂದ ಮುಕ್ತಗೊಳಿಸಿ ಸಮಸ್ಯೆಯನ್ನು ಧೈರ್ಯದಿಂದ ಎದುರಿಸುವ ವ್ಯಕ್ತಿತ್ವ ನಿರ್ಮಾಣ ಮಾಡುವ ಗುರಿಯೊಂದಿಗೆ ಯೋಗ ಮತ್ತು ಧ್ಯಾನ ತರಗತಿಗಳನ್ನು ಆರಂಭಿಸಲು ಉದ್ದೇಶಿಸಲಾಗಿದೆ ಎಂದು ಹೇಳಲಾಗಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular