HomeLatest NewsBREAKING: ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ: ಅಧಿಸೂಚನೆ ಪ್ರಕಟ

BREAKING: ಬಿಜೆಪಿ ರಾಷ್ಟ್ರ‍ೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕ ಘೋಷಣೆ: ಅಧಿಸೂಚನೆ ಪ್ರಕಟ

ನವದೆಹಲಿ: ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನಕ್ಕೆ ಚುನಾವಣಾ ದಿನಾಂಕವನ್ನು ಭಾರತೀಯ ಜನತಾ ಪಕ್ಷ ಘೋಷಿಸಿದೆ. ಈ ನಿಟ್ಟಿನಲ್ಲಿ ಅಧಿಸೂಚನೆ ಹೊರಡಿಸಿದೆ.

ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಸ್ಥಾನದ ಚುನಾವಣೆಗೆ ಜನವರಿ 19ರಂದು ನಾಮಪತ್ರ ಸಲ್ಲಿಕೆ ನಡೆಯಲಿದೆ. ಜನವರಿ 20ರಂದು ನೂತನ ಅಧ್ಯಕ್ಷರ ಹೆಸರನ್ನು ಅನೌಪಚಾರಿಕವಾಗಿ ಘೋಷಿಸಲಾಗುವುದು.

ಬಿಜೆಪಿಯ ನಿತಿನ್ ನಬಿನ್ ಅವರನ್ನು ಹಂಗಾಮಿ ಅಧ್ಯಕ್ಷರನ್ನಾಗಿ ಬಿಜೆಪಿ ಆಯ್ಕೆ ಮಾಡಿದ್ದು, ನಿತಿನ್ ನಬಿನ್ ಅವರೇ ಬಿಜೆಪಿಯ ರಾಷ್ಟ್ರೀಯ ಅಧ್ಯಕ್ಷರಾಗುವುದು ಖಚಿತ ಎಂದು ಹೇಳಲಾಗುತ್ತಿದೆ. ಜೆಪಿ ನಡ್ಡಾ ಅವರಿಂದ ತೆರವಾದ ಸ್ಥಾನಕ್ಕೆ ನಿತಿನ್ ನಬಿನ್ ಆಯ್ಕೆಯಾಗುವ ಸಾಧ್ಯತೆ ದಟ್ಟವಾಗಿದೆ. ನಿತಿನ್ ನಬಿನ್ ಜನವರಿ 19ರಂದು ನಾಮಪತ್ರ ಸಲ್ಲಿಸಲಿದ್ದಾರೆ. ನಾಮನಿರ್ದೇಶನದಲ್ಲಿ ಪ್ರಧಾನಿ ನರೇಂದ್ರ ಮೋದಿಯವರು ಪ್ರಸ್ತಾಪಕರಾಗಿ ಹಾಜರಿರಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular