HomeLatest NewsBREAKING : ತಾಂತ್ರಿಕ ದೋಷ  : ಟೇಕಾಫ್ ಆಗದ 'CM ಸಿದ್ದರಾಮಯ್ಯ' ತೆರಳಬೇಕಿದ್ದ ಹೆಲಿಕಾಪ್ಟರ್.!

BREAKING : ತಾಂತ್ರಿಕ ದೋಷ  : ಟೇಕಾಫ್ ಆಗದ ‘CM ಸಿದ್ದರಾಮಯ್ಯ’ ತೆರಳಬೇಕಿದ್ದ ಹೆಲಿಕಾಪ್ಟರ್.!

ಬೆಂಗಳೂರು :  ಸಿಎಂ ಸಿದ್ದರಾಮಯ್ಯ ತೆರಳಬೇಕಿದ್ದ ಹೆಲಿಕಾಪ್ಟರ್ ನಲ್ಲಿ ತಾಂತ್ರಿಕ ದೋಷ ಕಾಣಿಸಿಕೊಂಡಿದ್ದು, ಟೇಕಫ್ ಆಗಲೇ ಇಲ್ಲ.

ಹೌದು.   ಹೆಚ್ ಎ ಎಲ್ ನಿಂದ ವಿಶೇಷ ಹೆಲಿಕಾಪ್ಟರ್ ಮೂಲಕ  ಸಿಎಂ ಸಿದ್ದರಾಮಯ್ಯ ತುಮಕೂರಿಗೆ ತೆರಳಬೇಕಿತ್ತು. ಆದರೆ  ಹೆಲಿಕಾಪ್ಟರ್ ಟೇಕಫ್ ಆಗದ ಹಿನ್ನೆಲೆ ಸಿಎಂ ಸಿದ್ದರಾಮಯ್ಯ ರಸ್ತೆ ಮಾರ್ಗವಾಗಿ ತುಮಕೂರಿಗೆ ತೆರಳಿದ್ದಾರೆ. ತುಮಕೂರಿನಲ್ಲಿ ನಡೆಯಲಿರುವ ಕರ್ನಾಟಕ ಕ್ರೀಡಾಂಗಣ ಉದ್ಘಾಟನೆ ಕಾರ್ಯಕ್ರಮದಲ್ಲಿ ಅವರು ಭಾಗಿಯಾಗಲಿದ್ದಾರೆ ಎಂದು ತಿಳಿದು ಬಂದಿದೆ

.ತುಮಕೂರಿಗೆ ಆಗಮಿಸುವ ಸಿಎಂ ಸಿದ್ದರಾಮಯ್ಯ ರಾಜಣ್ಣ ಅವರ ಮನೆಯಲ್ಲಿ ನಡೆಯಲಿರುವ ಔತಣಕೂಟದಲ್ಲಿ ಭಾಗವಹಿಸಲಿದ್ದಾರೆ. ನಂತರ ಅವರ ಜೊತೆ ರಾಜಕೀಯ ಚರ್ಚೆ ನಡೆಸಲಿದ್ದಾರೆ. ನಂತರ ಕ್ರೀಡಾಂಗಣ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
ranjith
ranjith
Ranjith S S has a decade of experience in digital media. covering stories that spark conversations across the internet, Breaking news, viral moments and celebrity updates to everyday news that gets people talking.
RELATED ARTICLES

Most Popular