HomeLatest Newsಇಂದು ಸಂಜೆ ಭಾಲ್ಕಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಇಂದು ಸಂಜೆ ಭಾಲ್ಕಿಯಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಭೀಮಣ್ಣ ಖಂಡ್ರೆ ಅಂತ್ಯಕ್ರಿಯೆ

ಬೀದರ್: ಮಾಜಿ ಸಚಿವ, ಶತಾಯುಷಿ ಡಾ.ಭೀಮಣ್ಣ ಖಂಡ್ರೆ(103) ಇಹಲೋಕ ತ್ಯಜಿಸಿದ್ದಾರೆ. ಹಲವು ದಿನಗಳಿಂದ ವಯೋಸಹಜ ಅನಾರೋಗ್ಯದಿಂದ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರನ್ನು ಕೆಲವು ದಿನಗಳ ಹಿಂದೆ ಭಾಲ್ಕಿಯ ನಿವಾಸಕ್ಕೆ ಕರೆತರಲಾಗಿತ್ತು.

ನಿನ್ನೆ ರಾತ್ರಿ 10.50ರ ಸುಮಾರಿಗೆ ಭೀಮಣ್ಣ ಖಂಡ್ರೆ ಕೊನೆಯುಸಿರೆಳೆದಿದ್ದಾರೆ. ಅವರ ಪಾರ್ಥಿವ ಶರೀರವನ್ನು ಭಾಲ್ಕಿಯ ಗಾಂಧಿಗಂಜ್ ನಲ್ಲಿರುವ ಅವರ ಮನೆಯ ಆವರಣದಲ್ಲಿ ಶನಿವಾರ ಸಾರ್ವಜನಿಕ ದರ್ಶನಕ್ಕೆ ಇಡಲಾಗುವುದು.

ಸಂಜೆ 5 ಗಂಟೆಗೆ ಭಾಲ್ಕಿಯ ಚಿಕಲ್ ಚಂದ ರಸ್ತೆಯಲ್ಲಿರುವ ಶಾಂತಿಧಾಮದಲ್ಲಿ ಭೀಮಣ್ಣ ಖಂಡ್ರೆಯವರ ಶ್ರೀಮತಿ ಲಕ್ಷ್ಮೀಬಾಯಿ ಅವರ ಸಮಾಧಿ ಪಕ್ಕದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನಗಳು ನೆರವೇರಲಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಪುತ್ರ ಈಶ್ವರ್ ಖಂಡ್ರೆ ಈ ಬಗ್ಗೆ ಮಾಹಿತಿ ನೀಡಿದ್ದು, ಅಂತಿಮ ದರ್ಶನದ ನಂತರ ಮೆರವಣಿಗೆಯಲ್ಲಿ ಪಾರ್ಥಿವ ಶರೀರ ಕೊಂಡೊಯ್ದು ಶಾಂತಿಧಾಮದಲ್ಲಿ ವೀರಶೈವ ಲಿಂಗಾಯತ ಸಂಪ್ರದಾಯದಂತೆ ಅಂತಿಮ ವಿಧಿ ವಿಧಾನ ನೆರವೇರಿಸಲಾಗುವುದು ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular