HomeLatest Newsಮೆಟ್ರೋ ದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಗುಡ್ ನ್ಯೂಸ್

ಮೆಟ್ರೋ ದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಗುಡ್ ನ್ಯೂಸ್

ಬೆಂಗಳೂರು: ಮೆಟ್ರೋ ಪ್ರಯಾಣ ದರ ಏರಿಕೆ ಆತಂಕದಲ್ಲಿದ್ದ ಪ್ರಯಾಣಿಕರಿಗೆ ಸಿಹಿ ಸುದ್ದಿ ಸಿಕ್ಕಿದೆ. ಪ್ರತಿವರ್ಷ ಶೇಕಡ 5ರಷ್ಟು ಪ್ರಯಾಣ ದರವನ್ನು ಬಿಎಂಆರ್‌ಸಿಎಲ್ ಹೆಚ್ಚಳ ಮಾಡಬಹುದು ಎಂದು ದರ ನಿಗದಿ ಸಮಿತಿ ಶಿಫಾರಸು ಮಾಡಿದ್ದರೂ ಸದ್ಯಕ್ಕೆ ಮೆಟ್ರೋ ಪ್ರಯಾಣದರ ಏರಿಸುವ ಚಿಂತನೆ ಇಲ್ಲವೆಂದು ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

ಇಂಧನ ವ್ಯತ್ಯಾಸ, ಸಿಬ್ಬಂದಿ ವೆಚ್ಚ, ನಿರ್ವಹಣೆ ವೆಚ್ಚ ಸೇರಿದಂತೆ ಇತರ ವೆಚ್ಚಗಳನ್ನು ಹಿಂದಿನ ವರ್ಷಕ್ಕೆ ಹೋಲಿಕೆ ಮಾಡಿ ಎಷ್ಟು ಹೆಚ್ಚಾಗಿದೆ ಎನ್ನುವುದನ್ನು ಲೆಕ್ಕಾಚಾರ ಹಾಕಿ ಅದರ ಸರಾಸರಿಯಂತೆ ಪ್ರಯಾಣ ದರ ಹೆಚ್ಚಿಸಬೇಕು. ಇಲ್ಲವೇ ವಾರ್ಷಿಕ ಶೇಕಡ 5ರಷ್ಟು ಹೆಚ್ಚಳ ಮಾಡಬೇಕು. ಈ ಎರಡರಲ್ಲಿ ಯಾವುದು ಕಡಿಮೆಯೋ ಅದನ್ನು ಪಾಲಿಸಬೇಕು ಎಂದು ದರ ನಿಗದಿ ಸಮಿತಿ ವರದಿಯಲ್ಲಿ ತಿಳಿಸಿದೆ.

ಆದರೆ, ದರ ಏರಿಕೆಗೆ ಸಂಬಂಧಿಸಿದಂತೆ ಯಾವುದೇ ಪ್ರಕ್ರಿಯೆಯನ್ನು ಬಿಎಂಆರ್‌ಸಿಎಲ್ ಆರಂಭಿಸಿಲ್ಲ. ಸದ್ಯಕ್ಕೆ ದರ ಏರಿಕೆ ಮಾಡುವುದಿಲ್ಲ. ಮುಂದೆ ಏರಿಕೆ ಬಗ್ಗೆ ನಿರ್ಧರಿಸಿದಾಗ ಮಾಹಿತಿ ನೀಡುವುದಾಗಿ ಬಿಎಂಆರ್‌ಸಿಎಲ್ ಅಧಿಕಾರಿಗಳು ಹೇಳಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular