ಕಾರ್ಕಳ: ವಿದ್ಯುತ್ ಕಂಬದಿಂದ ಬಿದ್ದು ಕಾರ್ಮಿಕ ಸಾವನ್ನಪ್ಪಿದ ಘಟನೆ ಮುಡಾರು ಗ್ರಾಮದ ಬಜಗೋಳಿಯ ಅಬ್ಬೆಂಜಾಲು ಸಮೀಪ ನಡೆದಿದೆ.
ಅಸ್ಸಾಂ ರಾಜ್ಯದ ಸ್ವಂಕಾರ್ ಬಸುಮತ್ರಿ(29) ಮೃತಪಟ್ಟ ಕಾರ್ಮಿಕ ಎಂದು ಗುರುತಿಸಲಾಗಿದೆ. ಹೊಸದಾಗಿ ಅಳವಡಿಸಿದ್ದ ವಿದ್ಯುತ್ ಕಂಬದಲ್ಲಿ ಸ್ವಂಕಾರ್ ಕೆಲಸ ಮಾಡುವಾಗ ವೇಳೆ ವಿಪರೀತ ಗುಡುಗು, ಸಿಡಿಲು ಸಹಿತ ಮಳೆ ಆಗುತ್ತಿತ್ತು. ಈ ವೇಳೆ ಸಿಡಿಲು ಬಡಿದು ಅಥವಾ ಇತರೆ ಕಾರಣದಿಂದ ಸ್ವಂಕಾರ್ ಆಕಸ್ಮಿಕವಾಗಿ ವಿದ್ಯುತ್ ಕಂಬದಿಂದ ಕೆಳಗೆ ಬಿದ್ದಿದ್ದಾರೆ.
ತೀವ್ರ ಪೆಟ್ಟಾಗಿ ಅಸ್ವಸ್ಥರಾಗಿದ್ದ ಅವರನ್ನು ಕಾರ್ಕಳದ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗುವ ಮಾರ್ಗ ಮಧ್ಯಮೃತಪಟ್ಟಿದ್ದಾರೆ. ಕಾರ್ಕಳ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

