HomeIndiaಬೆಂಗಳೂರು-ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭ

ಬೆಂಗಳೂರು-ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭ

ಬೆಂಗಳೂರು-ಮುಂಬೈ ನಡುವೆ ಸೂಪರ್ ಫಾಸ್ಟ್ ರೈಲು ಓಡಿಸಲು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಈಗಾಗಲೇ ಒಪ್ಪಿಗೆ ನೀಡಿದ್ದಾರೆ. ಈ ರೈಲನ್ನು ಉತ್ತರ ಕರ್ನಾಟಕದ ಮೂಲಕ ಓಡಿಸಬೇಕು ಎಂದು ಆ ಭಾಗದ ಸಂಸದರು ಮನವಿಯನ್ನು ಸಲ್ಲಿಸಿದ್ದು, ಅದಕ್ಕೂ ಅನುಮೋದನೆ ಸಿಕ್ಕಿದೆ.

ಸದ್ಯದ ಮಾಹಿತಿ ಪ್ರಕಾರ ಕರ್ನಾಟಕದ ರಾಜಧಾನಿ ಬೆಂಗಳೂರು ಮತ್ತು ಮಹಾರಾಷ್ಟ್ರದ ರಾಜಧಾನಿ ಮುಂಬೈ ನಡುವೆ ದುರಂತೋ ಎಕ್ಸ್‌ಪ್ರೆಸ್ ರೈಲು ಆರಂಭವಾಗಲಿದೆ. ಈ ಕುರಿತು 2026-27ನೇ ಸಾಲಿನ ಬಜೆಟ್‌ನಲ್ಲಿ ಘೋಷಣೆ ಮಾಡುವ ನಿರೀಕ್ಷೆ ಇದೆ.

ಅಧಿಕಾರಿಗಳ ಮಾಹಿತಿ ಪ್ರಕಾರ ಈ ರೈಲು ತುಮಕೂರು, ದಾವಣಗೆರೆ, ಹುಬ್ಬಳ್ಳಿ, ಬೆಳಗಾವಿ, ಮೀರಜ್ ಮತ್ತು ಪುಣೆ ಮೂಲಕ ಸಂಚಾರವನ್ನು ನಡೆಸಲಿದೆ. ರೈಲಿನ ವೇಳಾಪಟ್ಟಿ, ದರ ಮತ್ತು ನಿಲ್ದಾಣಗಳ ವಿವರ ಇನ್ನು ಅಂತಿಮವಾಗಿಲ್ಲ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಬಜೆಟ್‌ನಲ್ಲಿ ಘೋಷಣೆ?: ಬೆಂಗಳೂರು-ಮೈಂಬೈ ನಡುವಿನ ದುರಂತೋ ಎಕ್ಸ್‌ಪ್ರೆಸ್ ರೈಲು ಬೆಂಗಳೂರು ನಗರದ ಕೆಎಸ್ಆರ್ ಬೆಂಗಳೂರು ಮತ್ತು ಮುಂಬೈನ ಛತ್ರಪತಿ ಶಿವಾಜಿ ಟರ್ಮಿನಸ್ ನಡುವೆ ಸಂಚಾರವನ್ನು ನಡೆಸಲಿವೆ.

ಈ ರೈಲು 1209 ಕಿ.ಮೀ. ದೂರವನ್ನು 18 ಗಂಟೆಗಳಲ್ಲಿ ಕ್ರಮಿಸಲಿದೆ. ಈ ರೈಲು ಉಭಯ ನಗರದ ನಡುವಿನ ಸಂಚಾರದ ಅವಧಿಯನ್ನು 6 ಗಂಟೆಗಳ ಕಾಲ ಕಡಿಮೆ ಮಾಡಲಿದೆ. ರೈಲು ಉತ್ತರ ಕರ್ನಾಟಕ ಮೂಲಕ ಸಾಗುವ ಕಾರಣ ಬೆಂಗಳೂರು-ಉತ್ತರ ಕರ್ನಾಟಕದ ಪ್ರಯಾಣಿಕರಿಗೆ ಅನುಕೂಲವಾಗಲಿದೆ.

ಈಗಾಗಲೇ ಬೆಂಗಳೂರು-ಮುಂಬೈ ಸೂಪರ್‌ಫಾಸ್ಟ್ ರೈಲಿಗೆ ರೈಲ್ವೆ ಮಂಡಳಿ ಅನುಮೋದನೆ ನೀಡಿದೆ. ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಭೇಟಿಯಾಗಿ ರೈಲು ಸಂಚಾರಕ್ಕೆ ಅನುಮೋದನೆ ನೀಡಿದ್ದಕ್ಕೆ ಧನ್ಯವಾದ ಅರ್ಪಿಸಿದ್ದಾರೆ. ಇದಕ್ಕೆ ಸಂಬಂಧಿಸಿದ ಪ್ರಕಟಣೆ & ವೇಳಾಪಟ್ಟಿಯನ್ನು ಶೀಘ್ರದಲ್ಲೇ ಸಾರ್ವಜನಿಕಗೊಳಿಸಲಾಗುವುದು ಎಂದು ಅವರು ಭರವಸೆ ನೀಡಿದ್ದಾರೆ ಎಂದು ಸಂಸದರು ಕೆಲವು ದಿನಗಳ ಹಿಂದೆ ಪೋಸ್ಟ್ ಹಾಕಿದ್ದರು.

ಧಾರವಾಡ ಸಂಸದ ಪ್ರಹ್ಲಾದ್ ಜೋಶಿ, ಬೆಳಗಾವಿ ಸಂಸದ ಜಗದೀಶ್ ಶೆಟ್ಟರ್ ಬೆಂಗಳೂರು-ಮುಂಬೈ ನಡುವಿನ ಸೂಪರ್ ಫಾಸ್ಟ್ ರೈಲು ಉತ್ತರ ಕರ್ನಾಟಕ ಮೂಲಕ ಸಾಗಬೇಕು ಎಂದು ಬೇಡಿಕೆ ಇಟ್ಟಿದ್ದರು. ಇದಕ್ಕೆ ಸಹ ರೈಲ್ವೆ ಸಚಿವರು ಒಪ್ಪಿಗೆ ಕೊಟ್ಟಿದ್ದಾರೆ.

ಬೆಂಗಳೂರು-ಮುಂಬೈ ನಡುವೆ ಪ್ರತಿದಿನ ನೂರಾರು ಜನರು ಸಂಚಾರವನ್ನು ನಡೆಸುತ್ತಾರೆ. ವಿಮಾನ ಪ್ರಯಾಣ ದುಬಾರಿ ಆಗಿದೆ. ರೈಲು ಪ್ರಯಾಣಕ್ಕೆ ಅಧಿಕ ಸಮಯಬೇಕಿದೆ. ಆದ್ದರಿಂದ ಉಭಯ ನಗರ ಸಂಪರ್ಕಿಸುವ ಸೂಪರ್ ಫಾಸ್ಟ್ ರೈಲಿಗೆ ಬೇಡಿಕೆ ಇದೆ.

2025ರ ಡಿಸೆಂಬರ್‌ನಲ್ಲಿ ಬೆಂಗಳೂರು ನಗರದ ಎಸ್‌ಎಂವಿಟಿ ಮತ್ತು ಮುಂಬೈನ ಲೋಕಮಾನ್ಯ ತಿಲಕ್ ಟರ್ಮಿನಸ್ ನಡುವೆ ವಾರಕ್ಕೆ 2 ಬಾರಿ ಸಂಚರಿಸುವ ಹೊಸ ಸೂಪರ್‌ಫಾಸ್ಟ್ ರೈಲು ಸೇವೆಗೆ ಅನುಮೋದನೆ ದೊರೆಕಿತ್ತು. ಈ ರೈಲು 1,209 ಕಿಲೋಮೀಟರ್ ದೂರವನ್ನು ಕ್ರಮಿಸಲು ಸುಮಾರು 24 ಗಂಟೆ ತೆಗೆದುಕೊಳ್ಳುತ್ತದೆ.

ಪ್ರಯಾಣದ ಅವಧಿ ಅಧಿಕವಾಗಿರುವ ಕಾರಣ ಪ್ರಯಾಣಿಕರ ಅಸಮಾಧಾನಕ್ಕೆ ಕಾರಣವಾಗಿದೆ. ರೈಲು ಹುಬ್ಬಳ್ಳಿ, ಪುಣೆ ಸೇರಿದಂತೆ 14 ನಿಲ್ದಾಣಗಳಲ್ಲಿ ನಿಲುಗಡೆ ಹೊಂದಿದೆ. ಆದರೆ ದುರಂತೋ ಎಕ್ಸ್‌ಪ್ರೆಸ್ ರೈಲು 18 ಗಂಟೆಗಳಲ್ಲಿ ಸಂಚಾರ ನಡೆಸಲಿದೆ ಎಂದು ನಿರೀಕ್ಷೆ ಮಾಡಲಾಗಿದೆ.

ಸದ್ಯದ ಮಾಹಿತಿ ದುರಂತೋ ಎಕ್ಸ್‌ಪ್ರೆಸ್ ರೈಲು ಸಂಜೆ 4.30ಕ್ಕೆ ಬೆಂಗಳೂರು ನಗರದಿಂದ ಹೊರಟು ಮರುದಿನ ಬೆಳಗ್ಗೆ 10.30ಕ್ಕೆ ಮುಂಬೈ ತಲುಪಲಿದೆ. ಈ ರೈಲಿನಲ್ಲಿ 3-ಎಸಿ ಟಿಕೆಟ್ ದರ ಸುಮಾರು 2,500 ರೂ. ಇರಲಿದೆ  ಎಂದು ಅಂದಾಜಿಸಲಾಗಿದೆ.

For Latest News Updates, Join Our Whatsapp Community🚩
Abinandan
Abinandan
ನಿವೇದಿತಾ ಬಿ.ಎ.. ಬಿ.ಎಡ್ ಪದವೀಧರರು. ಡಿಜಿಟಲ್ ಪತ್ರಿಕೋದ್ಯಮದಲ್ಲಿ ಕಳೆದ 4 ವರ್ಷಗಳಿಂದ ಸಕ್ರಿಯರಾಗಿದ್ದಾರೆ. Revenufacts ವೆಬ್‌ಸೈಟ್‌ನಲ್ಲಿ 3 ವರ್ಷ ಹಾಗೂ ಕರುನಾಡು ಸುದ್ದಿ ಮಾಧ್ಯಮದಲ್ಲಿ 1 ವರ್ಷ ಕಾರ್ಯನಿರ್ವಹಿಸಿದ ಅನುಭವ ಹೊಂದಿದ್ದಾರೆ. ಆರೋಗ್ಯ, ವಾಣಿಜ್ಯ, ಲೈಫ್‌ಸ್ಟೈಲ್ ವಿಭಾಗದಲ್ಲಿ ವಿಶೇಷ ಪರಿಣತಿ ಹೊಂದಿದ್ದಾರೆ. Nivedita is a skilled digital content creator with a strong academic background in B.A. and B.Ed. 4 years of experience in digital journalism.
RELATED ARTICLES

Most Popular