ದೇವನಹಳ್ಳಿ: ಟಿಪ್ಪರ್ ಲಾರಿ ಹಾಗೂ ಬೈಕ್ ನಡುವೆ ಸಂಬವಿಸಿದ ಭೀಕರ ಅಪಘಾತದಲ್ಲಿ ಮೂವರು ಸ್ಥಳದಲ್ಲೇ ಸಾವನ್ನಪ್ಪಿರುವ ಘಟನೆ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿ ಬಳಿಯ ಅಗಲಕೋಟೆ ಬಳಿ ನಡೆದಿದೆ.
ವೇಗವಾಗಿ ಬಂದ ಟಿಪ್ಪರ್ ಚಾಲಕ ಬೈಕ್ ಗೆ ಗುದ್ದಿ ಟಿಪ್ಪರ್ ಸಮೇತ ಪರಾರಿಯಾಗಿದ್ದಾನೆ. ಬೈಕ್ ನಲ್ಲಿದ್ದ ಮೂವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಕಾಲೇಜು ವಿದ್ಯಾರ್ಥಿ ತೌಸಿಫ್ ಸೇರಿದಂತೆ ಮೂವರು ಮೃತ ಪಟ್ಟಿದ್ದಾರೆ. ಇಬ್ಬರ ಗುರುತು ಪತ್ತೆಯಾಗಿಲ್ಲ.
ಘಟನಾ ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

