ಚಿಕ್ಕಬಳ್ಳಾಪುರ : ಮಹಿಳಾ ಅಧಿಕಾರಿಗೆ ಅಶ್ಲೀಲ ನಿಂದನೆ ಪ್ರಕರಣಕ್ಕೆ ಸಂಬಂಧಿಸಿದಂತೆ ಬಂಧನ ಭೀತಿಯಿಂದ ತಲೆಮರೆಸಿಕೊಂಡಿರುವ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ನಿರೀಕ್ಷಣಾ ಜಾಮೀನು ಕೋರಿ ಕೋರ್ಟ್ ಗೆ ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಹೌದು. ಚಿಕ್ಕಬಳ್ಳಾಪುರದ 2 ನೇ ಜಿಲ್ಲಾ ಅಪರ ಸತ್ರ ನ್ಯಾಯಾಲಯಕ್ಕೆ ನಿರೀಕ್ಷಣಾ ಜಾಮೀನು ಕೋರಿ ರಾಜೀವ್ ಗೌಡ ಅರ್ಜಿ ಸಲ್ಲಿಕೆ ಮಾಡಿದ್ದಾರೆ. ಆರೋಪಿ ರಾಜೀವ್ ಗೌಡ ಪರ ವಕೀಲ ಶಿವಶಂಕರ ರೆಡ್ಡಿ ಅರ್ಜಿ ಸಲ್ಲಿಕೆ ಮಾಡಿದ್ದಾರೆ ಎಂಬುದು ಸದ್ಯಕ್ಕೆ ಲಭ್ಯವಾಗಿರುವ ಮಾಹಿತಿಯಾಗಿದೆ.
ಚಿಕ್ಕಬಳ್ಳಾಪುರ ಜಿಲ್ಲೆಯ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ ಧಮ್ಕಿ ಹಾಕಿದ್ದರು. ಈ ಆಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದ್ದು, ಸಾರ್ವಜನಿಕ ವಲಯದಲ್ಲಿ ಭಾರಿ ಟೀಕೆ , ಆಕ್ರೋಶಕ್ಕೆ ಕಾರಣವಾಗಿತ್ತು. ಘಟನೆ ಬಳಿಕ ರಾಜೀವ್ ಗೌಡ ವಿರುದ್ಧ ಪ್ರಕರಣ ದಾಖಲಾಗಿದ್ದು, ಆರೋಪಿ ರಾಜೀವ್ ಗೌಡ ಬಂಧನಕ್ಕೆ ಪೊಲೀಸರು ಬಲೆ ಬೀಸಿದ್ದಾರೆ. ಸದ್ಯ ತಲೆಮರೆಸಿಕೊಂಡಿರುವ ರಾಜೀವ್ ಗೌಡ ವಕೀಲರ ಮೂಲಕ ಕೋರ್ಟ್ ಗೆ ನಿರೀಕ್ಷಣಾ ಜಾಮೀನು ಅರ್ಜಿ ಸಲ್ಲಿಕೆ ಮಾಡಿದ್ದಾರೆ.
ಕಲ್ಟ್ ಚಿತ್ರದ ಬ್ಯಾನರ್ ತೆರವುಗೊಳಿಸಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡಗೆ ಕರೆ ಮಾಡಿದ ಕಾಂಗ್ರೆಸ್ ಮುಖಂಡ ರಾಜೀವ್ ಗೌಡ ಅಶ್ಲೀಲವಾಗಿ ನಿಂದಿಸಿ, ಜೀವ ಬೆದರಿಕೆ ಹಾಕಿದ್ದರು. ಅನಧಿಕೃತವಾಗಿ ಹಾಕಿದ್ದ ಬ್ಯಾನರ್ ಅನ್ನು ತೆರವು ಮಾಡಿದ್ದಕ್ಕೆ ಶಿಡ್ಲಘಟ್ಟ ನಗರಸಭೆ ಪೌರಾಯುಕ್ತೆ ಅಮೃತಾ ಗೌಡ ಕಾಂಗ್ರೆಸ್ ನಾಯಕ ರಾಜೀವ್ ಗೌಡ ಕರೆ ಮಾಡಿ ಬೆದರಿಕೆ ಹಾಕಿದ್ದಾರೆ ಎನ್ನಲಾಗಿದೆ. ಈ ಕುರಿತಾದ ಆಡಿಯೋಗಳು ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

