HomeLatest Newsಜನವರಿ 21ರಿಂದ ರಾಷ್ಟ್ರಪತಿ ಭವನ ಪ್ರವೇಶಕ್ಕೆ ನಿರ್ಬಂಧ

ಜನವರಿ 21ರಿಂದ ರಾಷ್ಟ್ರಪತಿ ಭವನ ಪ್ರವೇಶಕ್ಕೆ ನಿರ್ಬಂಧ

ನವದೆಹಲಿ: ಜನವರಿ 21ರಿಂದ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶ ನಿರ್ಬಂಧಿಸಲಾಗಿದೆ ಎಂದು ಅಧಿಕೃತ ಪ್ರಕಟಣೆ ತಿಳಿಸಿದೆ.

ಗಣರಾಜ್ಯೋತ್ಸವ ಪರೇಡ್ ಹಾಗೂ ಬೀಟಿಂಗ್ ರೀಟ್ರೀಟ್ ಕಾರ್ಯಕ್ರಮ ಹಿನ್ನೆಲೆಯಲ್ಲಿ ಜನವರಿ 21 ರ್ಂದ ಜನವರಿ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿರ್ಬಂಧ ಹೇರಲಾಗಿದೆ.

ಗಣರಾಜ್ಯೋತ್ಸವ ಪರೇಡ್ ಕರ್ತವ್ಯ ಪಥದಲ್ಲಿ ನಡೆಯಲಿದೆ. ಬೀಟಿಂಗ್ ರೀಟ್ರೀಟ್ ಸಮಾರಂಭ ಜನವರಿ 29ರಂದು ರಾಷ್ಟ್ರಪತಿ ಭವನದ ಬಳಿಯಿರುವ ವಿಜಯ್ ಚೌಕ್ ನಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಜನವರಿ 21ರಿಂದ 29ರವರೆಗೆ ರಾಷ್ಟ್ರಪತಿ ಭವನಕ್ಕೆ ಸಾರ್ವಜನಿಕರ ಪ್ರವೇಶಕ್ಕೆ ನಿಷೇಧಿಸಲಾಗಿದೆ ಎಂದು ರಾಷ್ಟ್ರಪತಿ ಭವನ ತಿಳಿಸಿದೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

For Latest News Updates, Join Our Whatsapp Community🚩
RELATED ARTICLES

Most Popular