ಬೆಂಗಳೂರು: ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಕ್ರಿಕೆಟ್ ಪಂದ್ಯ ಆಯೋಜಿಸಲು ಸರ್ಕಾರದಿಂದ ಅನುಮತಿ ನೀಡಲಾಗಿದೆ.
ಈ ಮೂಲಕ ಆರ್‌ಸಿಬಿ ಅಭಿಮಾನಿಗಳಿಗೆ ಸಿಹಿ ಸುದ್ದಿ ಸಿಕ್ಕಿದೆ. ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಪಂದ್ಯಗಳನ್ನು ಆಯೋಜಿಸಲು ರಾಜ್ಯ ಗೃಹ ಇಲಾಖೆ ಕರ್ನಾಟಕ ರಾಜ್ಯ ಕ್ರಿಕೆಟ್ ಅಸೋಸಿಯೇಷನ್(KSCA)ಗೆ ಒಪ್ಪಿಗೆ ನೀಡಿದೆ.
ನ್ಯಾ. ಕುನ್ಹಾ ವರದಿಯಲ್ಲಿನ ಅಂಶಗಳನ್ನು ಜಾರಿಗೊಳಿಸಿ ಪಂದ್ಯಗಳನ್ನು ನಡೆಸಲು ಒಪ್ಪಿಗೆ ನೀಡಲಾಗಿದೆ. ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ ಗೃಹ ಇಲಾಖೆಯಿಂದ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಅಂತರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಗ್ರೀನ್ ಸಿಗ್ನಲ್ ನೀಡಲಾಗಿದೆ.
ಸರ್ಕಾರ, ಸಂಬಂಧಿತ ಅಧಿಕಾರಿಗಳು ನಿಗದಿಪಡಿಸಿರುವ ನಿರ್ದಿಷ್ಟ ಷರತ್ತುಗಳು, ನಿಯಮಗಳನ್ನು ಪಾಲಿಸುವ ಷರತ್ತಿನೊಂದಿಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅನುಮತಿ ನೀಡಲಾಗಿದೆ.
ಬೆಂಗಳೂರಿನ ಪ್ರತಿಷ್ಠಿತ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಂತರರಾಷ್ಟ್ರೀಯ ಮತ್ತು ಐಪಿಎಲ್ ಪಂದ್ಯಗಳನ್ನು ಆಯೋಜಿಸಲು ಕರ್ನಾಟಕ ಸರ್ಕಾರದ ಗೃಹ ಇಲಾಖೆಯು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆಗೆ(ಕೆಎಸ್‌ಸಿಎ) ಅನುಮತಿ ನೀಡಿದೆ. ಸರ್ಕಾರ ಮತ್ತು ಸಂಬಂಧಪಟ್ಟ ಅಧಿಕಾರಿಗಳು ಸೂಚಿಸಿದ ನಿರ್ದಿಷ್ಟ ನಿಯಮಗಳು ಮತ್ತು ಷರತ್ತುಗಳ ಅನುಸರಣೆಗೆ ಈ ಅನುಮತಿ ಒಳಪಟ್ಟಿರುತ್ತದೆ ಎಂದು ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ ಅಧಿಕೃತ ವಕ್ತಾರ ವಿನಯ್ ಮೃತ್ಯುಂಜಯ ಮಾಹಿತಿ ನೀಡಿದ್ದಾರೆ.

