HomeLatest Newsಪಿಜಿ ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕನಿಷ್ಠ ಅರ್ಹತಾ ಅಂಕ ಕಡಿತ ಹಿನ್ನೆಲೆ 3ನೇ...

ಪಿಜಿ ವೈದ್ಯಕೀಯ ಕೋರ್ಸ್ ಅಭ್ಯರ್ಥಿಗಳಿಗೆ ಗುಡ್ ನ್ಯೂಸ್: ಕನಿಷ್ಠ ಅರ್ಹತಾ ಅಂಕ ಕಡಿತ ಹಿನ್ನೆಲೆ 3ನೇ ಸುತ್ತಿನ ಸೀಟು ಹಂಚಿಕೆ

ಬೆಂಗಳೂರು: ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೂಚನೆ ಮೇರೆಗೆ ಪಿಜಿನೀಟ್-2025 ರಲ್ಲಿ ಪಿಜಿ ವೈದ್ಯಕೀಯ ಕೋರ್ಸುಗಳ ಪ್ರವೇಶಕ್ಕಾಗಿ ಕನಿಷ್ಠ ಅರ್ಹತಾ ಅಂಕಗಳನ್ನು ಕಡಿಮೆಗೊಳಿಸಿ  ಪರಿಷ್ಕರಿಸಿರುವುದರಿಂದ 3ನೇ ಸುತ್ತಿನ (ಮಾಪ್-ಅಪ್) ಸೀಟು ಹಂಚಿಕೆಗಾಗಿ ಅರ್ಹ ಆಸಕ್ತ ಅಭ್ಯರ್ಥಿಗಳು ಪಾಲ್ಗೊಳ್ಳಬಹುದು.

ಇದಕ್ಕಾಗಿ ಆನ್ ಲೈನ್ ನೋಂದಣಿ, ಅರ್ಜಿ ಸಲ್ಲಿಕೆ ಹಾಗೂ ಶುಲ್ಕ ಪಾವತಿಗಾಗಿ ಪ್ರಾಧಿಕಾರದ ಪೋರ್ಟಲ್ ಅನ್ನು  ಜ.18ರ ಬೆಳಿಗ್ಗೆ 11ರಿಂದ ಜ.26ರ ಬೆಳಿಗ್ಗೆ 11ರವರೆಗೆ ತೆರೆದಿರಲಾಗುತ್ತದೆ . 3ನೇ ಸುತ್ತಿನಲ್ಲಿ (ಮಾಪ್- ಅಪ್) ಲಭ್ಯವಾಗುವ ಸೀಟುಗಳ ಹಂಚಿಕೆಗೆ ಮಾತ್ರ ಇತರೆ ಅಭ್ಯರ್ಥಿಗಳ ಜೊತೆಯಲ್ಲಿ ಭಾಗವಹಿಸಲು ಅರ್ಹತೆ ಪಡೆಯಬಹುದು.

ಮುಂದಿನ ಯಾವುದೇ ಸುತ್ತಿನ ಸೀಟು ಹಂಚಿಕೆಗೆ ಆನ್ ಲೈನ್ ನೋಂದಣಿ ಮಾಡಿಕೊಳ್ಳಲು / ಅರ್ಜಿ ಸಲ್ಲಿಸಲು ಅವಕಾಶಗಳನ್ನು ನೀಡುವುದಿಲ್ಲ.  3ನೇ ಸುತ್ತಿಗೆ ಲಭ್ಯವಿರುವ ಸೀಟುಗಳ ವಿವರಗಳನ್ನು ಪ್ರಾಧಿಕಾರದ ವೆಬ್ ಸೈಟ್ ನಲ್ಲಿ ಪ್ರಕಟಿಸಲಾಗಿದೆ. ರದ್ದುಗೊಳ್ಳಬಹುದಾದ ಅಥವಾ ಹೊಸದಾಗಿ ಸೇರ್ಪಡೆಯಾಗುವ ಸೀಟುಗಳು ಇದ್ದಲ್ಲಿ ಅವನ್ನೂ ಹಂಚಿಕೆಗೆ ಪರಿಗಣಿಸಲಾಗುತ್ತದೆ. ಅಭ್ಯರ್ಥಿಗಳು ಪರಿಷ್ಕೃತ ಮಾಹಿತಿಗಾಗಿ ಆಗಿಂದಾಗ್ಗೆ ಪ್ರಾಧಿಕಾರದ ವೆಬ್ ಸೈಟ್ ಗೆ ಭೇಟಿ ನೀಡುತ್ತಿರಬೇಕು.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಈವರೆಗೆ ನೋಂದಣಿ ಮಾಡದಿರುವ ಪಿಜಿ ವೈದ್ಯಕೀಯ ಅರ್ಹ ಅಭ್ಯರ್ಥಿಗಳೂ ನೋಂದಣಿ ಮಾಡಿ ಅರ್ಜಿ ಸಲ್ಲಿಸಬಹುದು.

ಮೂರನೇ ಸುತ್ತಿನ ಸೀಟು ಹಂಚಿಕೆಯಲ್ಲಿ ಭಾಗವಹಿಸಲು ಇಚ್ಛಿಸುವ ಅರ್ಹ ಅಭ್ಯರ್ಥಿಗಳು ಜನವರಿ 29 ಮತ್ತು 30ರಂದು KEA ಕಚೇರಿಯಲ್ಲಿ ಮೂಲ ದಾಖಲೆಗಳನ್ನು ಸಲ್ಲಿಸಬೇಕು. ಅದರ‌ ನಂತರವೇ ಆಪ್ಷನ್ಸ್ ದಾಖಲಿಸಲು ಅವಕಾಶ ನೀಡಲಾಗುತ್ತದೆ. ಈ ಹಿಂದೆ ಸಲ್ಲಿಸಿ, ವಾಪಸ್ ಪಡೆದಿರುವ ಅಭ್ಯರ್ಥಿಗಳು ಕೂಡ ಪುನಃ ಸಲ್ಲಿಸಿಯೇ ಸೀಟು ಹಂಚಿಕೆ ಪ್ರಕ್ರಿಯೆಯಲ್ಲಿ ಭಾಗವಹಿಸಬಹುದು ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಕಾರ್ಯನಿರ್ವಾಹಕ ನಿರ್ದೇಶಕ ಹೆಚ್. ಪ್ರಸನ್ನ ತಿಳಿಸಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular