HomeLatest NewsBREAKING: ಜಾರ್ಖಂಡ್ ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ: 5 ಜನ ಸಾವು, 25 ಮಂದಿಗೆ...

BREAKING: ಜಾರ್ಖಂಡ್ ನಲ್ಲಿ ಮದುವೆ ದಿಬ್ಬಣದ ಬಸ್ ಪಲ್ಟಿ: 5 ಜನ ಸಾವು, 25 ಮಂದಿಗೆ ಗಾಯ

ರಾಂಚಿ: ಜಾರ್ಖಂಡ್‌ನ ಲತೇಹಾರ್ ಜಿಲ್ಲೆಯಲ್ಲಿ ಮದುವೆ ದಿಬ್ಬಣ ಬಸ್ ಉರುಳಿಬಿದ್ದ ಪರಿಣಾಮ ಕನಿಷ್ಠ ಐದು ಜನರು ಸಾವನ್ನಪ್ಪಿದ್ದು, 25 ಜನರು ಗಾಯಗೊಂಡಿದ್ದಾರೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯಿಂದ ಮಹುವಾದರ್‌ಗೆ ಹೋಗುತ್ತಿದ್ದ ಬಸ್ ಮಹುವಾದರ್‌ ಪೊಲೀಸ್ ಠಾಣೆ ವ್ಯಾಪ್ತಿಯ ಓರ್ಸಾ ಕಣಿವೆಯಲ್ಲಿ ಅಪಘಾತಕ್ಕೀಡಾಗಿದೆ.

ಅಪಘಾತದಲ್ಲಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಎಂದು ಜಾರ್ಖಂಡ್ ಪೊಲೀಸರು ತಿಳಿಸಿದ್ದಾರೆ, ರಕ್ಷಣಾ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದೆ ಮತ್ತು ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಅಪಘಾತಕ್ಕೆ ಕಾರಣವೇನು ಎಂಬುದು ಸ್ಪಷ್ಟವಾಗಿಲ್ಲ ಮತ್ತು ತನಿಖೆಯನ್ನು ಪ್ರಾರಂಭಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದ ಬಲರಾಂಪುರ ಜಿಲ್ಲೆಯಿಂದ ಲತೇಹಾರ್‌ನ ಮಹುವಾದರ್‌ಗೆ ಮದುವೆಗಾಗಿ ಬರುತ್ತಿದ್ದ ಬಸ್ ಪಲ್ಟಿಯಾಗಿ ಐದು ಜನರು ಸ್ಥಳದಲ್ಲೇ ಸಾವನ್ನಪ್ಪಿದರು. ಗಾಯಾಳುಗಳನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದೆ ಎಂದು ಪೊಲೀಸ್ ವರಿಷ್ಠಾಧಿಕಾರಿ(ಎಸ್‌ಪಿ) ಕುಮಾರ್ ಗೌರವ್ ತಿಳಿಸಿದ್ದಾರೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಘಟನೆಯ ಬಗ್ಗೆ ಮಾಹಿತಿ ಪಡೆದ ಮುಖ್ಯಮಂತ್ರಿ ಹೇಮಂತ್ ಸೊರೇನ್, ಸಂತ್ರಸ್ತರಿಗೆ ತಕ್ಷಣದ ನೆರವು ನೀಡುವಂತೆ ಲತೇಹಾರ್ ಜಿಲ್ಲಾಡಳಿತಕ್ಕೆ ನಿರ್ದೇಶನ ನೀಡಿದ್ದಾರೆ. ತಕ್ಷಣ ಗಮನ ಹರಿಸಿ ಗಾಯಾಳುಗಳಿಗೆ ಸೂಕ್ತ ಆರೋಗ್ಯ ಸೌಲಭ್ಯಗಳನ್ನು ಒದಗಿಸಿ ಎಂದು ಸೂಚನೆ ನೀಡಿದ್ದಾರೆ.

For Latest News Updates, Join Our Whatsapp Community🚩
niranjan
niranjan
Niranjan working in media filed from 24 years. He worked in Hubballi Udayavani and local newspapers in Shivamogga. ನಿರಂಜನ ಮೂರ್ತಿ ಎಚ್.ಸಿ. 24 ವರ್ಷಗಳಿಂದ ಮಾಧ್ಯಮ ಕ್ಷೇತ್ರದಲ್ಲಿದ್ದಾರೆ. ಎಂಎ ಕನ್ನಡ, ಪಿಜಿ ಡಿಪ್ಲೊಮಾ ಇನ್ ಜರ್ನಲಿಸಂ ವ್ಯಾಸಂಗ ಮಾಡಿದ್ದಾರೆ. ಶಿವಮೊಗ್ಗದ ಎಚ್ಚರಿಕೆ, ನಮ್ಮನಾಡು, ಜೈ ಕರುನಾಡು, ನುಡಿಗಿಡ, ಕ್ರಾಂತಿ ಭಗತ್ ಸ್ಥಳೀಯ ಪತ್ರಿಕೆಗಳಲ್ಲಿ ವರದಿಗಾರನಾಗಿ, ಹುಬ್ಬಳ್ಳಿಯ ಉದಯವಾಣಿಯಲ್ಲಿ ಉಪ ಸಂಪಾದಕರಾಗಿ ಕಾರ್ಯ ನಿರ್ವಹಣೆ ಮಾಡಿದ್ದಾರೆ.
RELATED ARTICLES

Most Popular