ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಬಾಗಲಕೋಟೆ ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ. ಚಾಲುಕ್ಯ ಉತ್ಸವ ಉದ್ಘಾಟನೆಗಾಗಿ ಸಿಎಂ ಆಗಮಿಸಲಿದ್ದಾರೆ.
ಇಂದು ಸಂಜೆ 4:15ಕ್ಕೆ ಬಾದಾಮಿಗೆ ಆಗಮಿಸಲಿರುವ ಸಿಎಂ ಸಿದ್ದರಾಮಯ್ಯ ನಂತರ ರಾಮದುರ್ಗ ವೃತ್ತದಲ್ಲಿ ಇಮ್ಮಡಿ ಪುಲಿಕೇಶಿ ಪುತ್ಥಳಿಗೆ ಶಿಲಾನ್ಯಾಸ ನೆರವೇರಿಸುವರು. ನವೀಕೃತ ಬಾದಾಮಿ ಕೋರ್ಟ್ ಹೋಟೆಲ್ ಉದ್ಘಾಟನೆ ಹಾಗೂ ಶ್ರೀ ಜಿತ್ ರೆಸಾರ್ಟ್ ಅಡಿಗಲ್ಲು ಸಮಾರಂಭದಲ್ಲಿ ಭಾಗವಹಿಸಲಿದ್ದಾರೆ.
ನಂತರ ಅಂಜುಮನ್ ಎ ಇಸ್ಲಾಂ ಕಮಿಟಿ ಬಾದಾಮಿ, ವಕ್ಪ್ ಮತ್ತು ಅಲ್ಪಸಂಖ್ಯಾತ ಕಲ್ಯಾಣ ಇಲಾಖೆ ಕಾರ್ಯಕ್ರಮದಲ್ಲಿ ಭಾಗವಹಿಸಲಿದ್ದಾರೆ. ಇಲಾಖೆಯ ವಿವಿಧ ಕಾಮಗಾರಿಗಳಿಗೆ ಶಿಲಾನ್ಯಾಸ ನೆರವೇರಿಸಲಿದ್ದಾರೆ. ನಂತರ ಎಸ್ಎಫ್ ಹೊಸಗೌಡರ ಮತ್ತು ಸನ್ಸ್ ಪೆಟ್ರೋಲಿಯಂಗೆ ಚಾಲನೆ ನೀಡಲಿದ್ದಾರೆ. ಇಂದು ಸಂಜೆ 5:30ಕ್ಕೆ ಬಾದಾಮಿಯ ಬನಶಂಕರಿ ದೇವಾಲಯಕ್ಕೆ ಭೇಟಿ ನೀಡಲಿದ್ದಾರೆ. ಚಾಲುಕ್ಯ ಉತ್ಸವದಲ್ಲಿ ಭಾಗವಹಿಸಲಿದ್ದಾರೆ.

