HomeLatest NewsBIG NEWS: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವರಲ್: ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರೊಂದಿಗೆ ಅಸಭ್ಯ...

BIG NEWS: ಡಿಜಿಪಿ ರಾಮಚಂದ್ರ ರಾವ್ ರಾಸಲೀಲೆ ವಿಡಿಯೋ ವರಲ್: ಕಚೇರಿಯಲ್ಲಿ ಕರ್ತವ್ಯದಲ್ಲಿದ್ದಾಗಲೇ ಮಹಿಳೆಯರೊಂದಿಗೆ ಅಸಭ್ಯ ವರ್ತನೆ

ಬೆಂಗಳೂರು: ಡಿಜಿಪಿ ರಾಮಚಂದ್ರ ರಾವ್ ಕರ್ತವ್ಯದ ವೇಳೆ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ಇಲಾಖೆಯ ಮಾನ ಮರ್ಯಾದೆಯನ್ನು ಹರಾಜು ಹಾಕಿರುವ ಘಟನೆ ಬೆಳಕಿಗೆ ಬಂದಿದೆ.

ಅಕ್ರಮ ಚಿನ್ನ ಸಾಗಾಣಿಕೆ ಪ್ರಕರಣದಲ್ಲಿ ಜೈಲು ಪಾಲಾಗಿರುವ ನಟಿ ರನ್ಯಾ ರಾವ್ ಅವರ ಮಲತಂದೆ ಡಿಜಿಪಿ ರಾಮಚಂದ್ರ ರಾವ್ ಕಚೇರಿಯಲ್ಲಿಯೇ ಮಹಿಳೆಯರ ಜೊತೆ ಸರಸ ಸಲ್ಲಾಪದಲ್ಲಿ ತೊಡಗಿರುವ ಅಸಭ್ಯ ವಿಡಿಯೋಗಳು ವೈರಲ್ ಆಗಿವೆ. ನಟಿ ರನ್ಯಾರಾವ್ ಚಿನ್ನ ಕಳ್ಳ ಸಾಗಾಣೆ ಪ್ರಕರಣದಲ್ಲಿಯೂ ರಾಮಚಂದ್ರ ರಾವ್ ಹೆಸರು ತಳುಕು ಹಾಕಿಕೊಂಡಿತ್ತು.

ಪ್ರಕರಣ ಬೆಳಕಿಗೆ ಬರುತ್ತಿದ್ದಂತೆ ಅಧಿಕಾರಿಯನ್ನು ಕಡ್ಡಾಯ ರಜೆ ಮೇಲೆ ಕಳುಹಿಸಲಾಗಿತ್ತು. ಪ್ರಸ್ತುತ ರಾಮಚಂದ್ರರಾವ್ ಡಿಸಿಆರ್ ಇ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ. ರನ್ಯಾ ರಾವ್ ಪ್ರಕರಣಕ್ಕಿಂತಲೂ ಮೊದಲೇ ನಡೆದಿರುವ ಪ್ರಕರಣ ಇದಾಗಿದೆ. ಒಂದು ವರ್ಷದ ಹಿಂದೆ ಡಿಜಿಪಿ ರಾಮಚಂದ್ರ ರಾವ್ ತಮ್ಮ ಕಚೇರಿಯಲ್ಲಿಯೇ, ಸಮವಸ್ತ್ರದಲ್ಲಿದ್ದಾಗಲೇ ರಾಸಲೀಲೆಯಲ್ಲಿ ಮೈಮರೆತಿರುವ ಅಸಭ್ಯ ದೃಶ್ಯಗಳು ಸಾಮಾಜಿಕ ಮಾಧ್ಯಮಗಳಲ್ಲಿ ಹರಿದಾಡುತ್ತಿವೆ.

📱 ಬ್ರೇಕಿಂಗ್ ನ್ಯೂಸ್ ಬೇಗ ಬೇಕೆ?KannadaDunia App ಡೌನ್‌ಲೋಡ್ ಮಾಡಿ, ತಾಜಾ ಸುದ್ದಿ ಮೊದಲು ಪಡೆಯಿರಿ.
APP ತೆರೆಯಿರಿ

ಚಿನ್ನ ಸಾಗಾಣಿಕೆ ಕೇಸ್ ನಲ್ಲಿ ಪರಪ್ಪನ ಅಗ್ರಹಾರ ಜೈಲು ಸೇರಿರುವ ನಟಿ ರನ್ಯಾ ರಾವ್ ಮಲತಂದೆ ಹಿರಿಯ ಪೊಲೀಸ್ ಅಧಿಕಾರಿ ಕಚೇರಿಯಲ್ಲಿಯೇ ರಾಸಲೀಲೆಯಲ್ಲಿ ತೊಡಗಿರುವ ದೃಶ್ಯ ರಾಜ್ಯಾದ್ಯಂತ ಆಕ್ರೋಶಕ್ಕೆ ಕಾರಣವಾಗಿದೆ. ರಾಮಚಂದ್ರ ರಾವ್ ಅವರನ್ನು ತಕ್ಷಣ ಹುದ್ದೆಯಿಂದ ಅಮಾನತುಗೊಳಿಸಿ ಅವರ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು ಎಂಬ ಒತ್ತಾಯ ಕೇಳಿಬರುತ್ತಿದೆ.

For Latest News Updates, Join Our Whatsapp Community🚩
RELATED ARTICLES

Most Popular